• ಹೋಂ
  • »
  • ನ್ಯೂಸ್
  • »
  • ವಿಜಯಪುರ
  • »
  • Vijayapura News: ಕೈಮಗ್ಗ ನೇಕಾರರರಿಗೆ ಸಾಲ ಸೌಲಭ್ಯ; ಅರ್ಜಿ ಸಲ್ಲಿಸುವುದು ಹೇಗೆ? ವಿವರ ಇಲ್ಲಿದೆ

Vijayapura News: ಕೈಮಗ್ಗ ನೇಕಾರರರಿಗೆ ಸಾಲ ಸೌಲಭ್ಯ; ಅರ್ಜಿ ಸಲ್ಲಿಸುವುದು ಹೇಗೆ? ವಿವರ ಇಲ್ಲಿದೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಹಾಗಾದರೆ ಹೇಗೆ ಅರ್ಜಿ ಸಲ್ಲಿಸುವುದು? ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳೇನು?  ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಲ್ಲ ವಿವರ ಇಲ್ಲಿದೆ ನೋಡಿ. 

  • Share this:

    ವಿಜಯಪುರ : ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ಜಿಲ್ಲೆಯ ಕೈಮಗ್ಗ ನೇಕಾರರಿಗೆ 2022-23ನೇ ಸಾಲಿಗೆ ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಾಲ ಸೌಲಭ್ಯ ಒದಗಿಸಲಾಗುತ್ತಿದೆ. ಸಾಲ ಸೌಲಭ್ಯ ಪಡೆಯಲಿಚ್ಛಿಸುವ ಕೈಮಗ್ಗ ನೇಕಾರರು (Handloom Weaver) ಅರ್ಜಿಗಳನ್ನು ಕೈಮಗ್ಗ ಮತ್ತು ಜವಳಿ ಇಲಾಖೆ, ವಿಜಯಪುರ ಕಚೇರಿಯಿಂದ (Vijayapura News) ಅರ್ಜಿಗಳನ್ನು ಪಡೆಯಬಹುದು. ಅರ್ಜಿಗಳನ್ನು ಭರ್ತಿ ಮಾಡಿ ಜುಲೈ 10ರೊಳಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವಿಜಯಪುರ ಕಚೇರಿಗೆ ಸಲ್ಲಿಸಬೇಕು. ಹಾಗಾದರೆ ಹೇಗೆ ಅರ್ಜಿ ಸಲ್ಲಿಸುವುದು? ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳೇನು?  ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಲ್ಲ ವಿವರ ಇಲ್ಲಿದೆ ನೋಡಿ. 


    ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳಿವು
    ಕೇಂದ್ರ ಸರ್ಕಾರ ನೀಡಿರುವ ನೇಕಾರರ ಪೆಹಚಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ರೇಷನ್ ಕಾರ್ಡ್, ಆಧಾರ ಕಾರ್ಡ್, ಆಧಾರ್ ನಂಬರ್ ಸೀಡ್ ಇರುವ ಬ್ಯಾಂಕ್ ಪಾಸ್​ಬುಕ್, ಭಾವಚಿತ್ರದಂತಹ ಅಗತ್ಯ ದಾಖಲೆಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.


    ಇದನ್ನೂ ಓದಿ: Belagavi Police Museum: ಬೆಳಗಾವಿ ಪೊಲೀಸ್ ಮ್ಯೂಸಿಯಂ ನೋಡಿದ್ದೀರಾ? ವಿಡಿಯೋ ನೋಡಿ!


    ಜಿಲ್ಲೆಯಲ್ಲಿ ಸಾಕಷ್ಟು ಕುಟುಂಬಗಳಿದ್ದು ಬಡ ನೇಕಾರರು ಈ ಸಾಲ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಅಗತ್ಯ ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಾಲವನ್ನು ಕಡಿಮೆ ಬಡ್ಡಿದರದಲ್ಲಿ ಸಾಲವನ್ನು ನೀಡಲಾಗುತ್ತದೆ. ಈ ಪ್ರಯೋಜನೆಯನ್ನು ವಿಜಯಪುರ ಜಿಲ್ಲೆಯ ನೇಕಾರರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.


    ವಿಳಾಸ ಕೈಮಗ್ಗ ಮತ್ತು ಜವಳಿ ಇಲಾಖೆ ವಿಜಯಪುರ
    ಹೆಚ್ಚಿನ ಮಾಹಿತಿಗಾಗಿ ಕರೆಮಾಡಿ ದೂರವಾಣಿ ಸಂಪರ್ಕ ಸಂಖ್ಯೆ – 08362 242073


    ಇದನ್ನೂ ಓದಿ: Vijayapura: ಪ್ಲಾಸ್ಟಿಕ್, ಮದ್ಯದ ಬಾಟಲಿ ಹೆಕ್ಕಿದ ಸ್ವಾಮೀಜಿ! ವಿಡಿಯೋ ನೋಡಿ

    ಈ ದೂರವಾಣಿ ಸಂಖ್ಯೆಗೆ ಕರೆಮಾಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು. ಅಲ್ಲದೇ ವಿಜಯಪುರ ಸಹಾಯಕ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಶಿಕಾರಖಾನೆ, ಸ್ಟೇಷನ್ ಬ್ಯಾಕ್ ರೋಡ್, ವಿಜಯಪುರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ವರದಿ – ಪ್ರಶಾಂತ ಹೂಗಾರ ವಿಜಯಪುರ

    Published by:guruganesh bhat
    First published: