Vijayapura News: ವಿಜಯಪುರದ ಜನರೇ, ನಿಮ್ಮ ಸಮಸ್ಯೆಗಳಿಗೆ ಸಿಗಲಿದೆ ಸ್ಥಳದಲ್ಲೇ ಪರಿಹಾರ!

ಮೂಲಭೂತ ಸಮಸ್ಯೆಗಳನ್ನ ಒಳಗೊಂಡಂತೆ ಸಾರ್ವಜನಿಕರ ಸಮಸ್ಯೆಯನ್ನ ಬಗೆಹರಿಸಲಾಗುತ್ತದೆ. ಕಾರಣ ಇದರ ಸದುಪಯೋಗವನ್ನ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ

ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ

  • Share this:
    ವಿಜಯಪುರ ಜಿಲ್ಲೆಯ ಜನರಿಗೆ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು (Vijayapura News) ಸದವಕಾಶವೊಂದು ದೊರೆತಿದೆ. ಈ ಬಾರಿ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದಲ್ಲಿ ಜೂನ್ 24ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಗ್ರಾಮಸ್ಥರಿಗೆ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಆನ್‌ಲೈನ್ ಮೂಲಕ ಸಂಬಂಧಿಸಿದ ನಾಡ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಎಲ್ಲಾ ಅರ್ಹ ಬಡ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ (BPL Card) ದೊರೆತಿರುವ ಬಗ್ಗೆ ಖಾತ್ರಿ ಪಡಿಸಿಕೊಂಡು ಗ್ರಾಮ್ ಒನ್ ಕೇಂದ್ರಗಳ ಮೂಲಕ ಎಬಿಆರ್‌ಕೆ ಕಾರ್ಡುಗಳನ್ನು ನೀಡಲಾಗುತ್ತದೆ. ಮತ್ತು ಬಾಕಿ ಇರುವ ರೈತರಿಗೆ ಕಿಸಾನ್ ಕಾರ್ಡ್ ಕೊಡಬೇಕು. ಅರಣ್ಯ ಇಲಾಖೆಯಿಂದ ರೈತರಿಗೆ ನೀಡಬೇಕು. ಕೃಷಿ ಇಲಾಖೆಯಿಂದ ಬೀಜಗಳ ವಿತರಣೆ ಮಾಡಬೇಕೆಂದು ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ.

    ಜಿಲ್ಲೆಯಲ್ಲಿ ನಿರ್ಲಕ್ಷ್ಯಕ್ಕೆ ಒಳಪಟ್ಟ ಗ್ರಾಮಗಳ ಬಗ್ಗೆ ಬೆಳಕು ಚೆಲ್ಲಲು ಮುಂದಾಗಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಜೂನ್ 24ರಂದು ನಡೆಯಲಿದ್ದು ಗ್ರಾಮದ ಮೂಲಭೂತ ಸಮಸ್ಯೆಗಳನ್ನ ಒಳಗೊಂಡಂತೆ ಸಾರ್ವಜನಿಕರ ಸಮಸ್ಯೆಯನ್ನ ಬಗೆಹರಿಸಲಾಗುತ್ತದೆ. ಕಾರಣ ಇದರ ಸದುಪಯೋಗವನ್ನ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.

    ಏನಿದು ಗ್ರಾಮ ವಾಸ್ತವ್ಯ ಕಾರ್ಯಕ್ರಮ?
    ಕಂದಾಯ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ತಿಳಿಸಿದಂತೆ ಪ್ರತಿ ತಿಂಗಳು ಮೂರನೇ ಶನಿವಾರ ಗ್ರಾಮ ಭೇಟಿ ವಾಸ್ತವ್ಯ ಕಾರ್ಯಕ್ರಮ ನಡೆಸಲಾಗುತ್ತಿದೆ.

    ಅಧಿಕಾರಿಗಳಿಗೆ ವಿವಿಧ ಸೂಚನೆ
    ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದಲ್ಲಿ ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ಇರಬೇಕು. ಗ್ರಾಮ ಭೇಟಿ ನೀಡುವ ಮೊದಲೇ, ಗ್ರಾಮ ಭೇಟಿ ಕಾರ್ಯಸೂಚಿಗಳ ಅನ್ವಯ ಫಲಾನುಭವಿಗಳ ಅರ್ಜಿಗಳನ್ನು ಸಂಗ್ರಹಿಸಿ ಅರ್ಜಿಗಳ ಮೇಲೆ ಯಾರ ಹಂತದಲ್ಲಿ ಕ್ರಮ ತೆಗೆದುಕೊಳ್ಳಬೇಕು ಎನ್ನುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಗ್ರಾಮಗಳಿಗೆ ಭೇಟಿ ನೀಡಿದ ಮೇಲೆ ವಿಲೇವಾರಿಯಾಗಿರುವ ಬಗ್ಗೆ ಸಂಬಂಧ ಪಟ್ಟ ಫಲಾನುಭವಿಗಳಿಗೆ ತಿಳಿಸಬೇಕು. ಬೇರೆ ಬೇರೆ ಹಂತದಲ್ಲಿ ವಿಚಾರಣೆ ಅವಶ್ಯಕತೆ ಇದ್ದರೆ ಅದನ್ನು ಸಹ ಪೂರ್ಣಗೊಳಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದ್ದಾರೆ.

    Bidarakundi
    ಬಿದರಕುಂದಿಗೆ ಹೀಗೆ ಬನ್ನಿ (ಚಿತ್ರಕೃಪೆ: ಗೂಗಲ್ ಮ್ಯಾಪ್ಸ್)

    ಗ್ರಾಮದ ಎಲ್ಲ ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ
    ಭೇಟಿ ನೀಡಿದ ಗ್ರಾಮದಲ್ಲಿನ ಎಲ್ಲಾ ಪಹಣಿಯಲ್ಲಿನ ಲೋಪದೋಷಗಳು, ಪಹಣಿ ಕಾಲಂ 3 ಮತ್ತು ಅಕಾರ್ ಬಂದ್ ತಾಳೆ ಹೊಂದಿರುವ ಬಗ್ಗೆ ಖಚಿತಪಡಿಸಿಕೊಂಡು ಗ್ರಾಮದ ಎಲ್ಲ ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಪರಿಶೀಲಿಸಿ, ಬಿಟ್ಟು ಹೋದಂತಹ ಪ್ರಕರಣಗಳಿಗೆ ಸ್ಥಳದಲ್ಲಿಯೇ ಆದೇಶವನ್ನ ನೀಡಲಾಗುತ್ತದೆ.

    ಆಧಾರ್ ಕಾರ್ಡಿನ ಅನುಕೂಲತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು
    ಗ್ರಾಮದಲ್ಲಿ ಸ್ಮಶಾನ ಲಭ್ಯತೆಯ ಬಗ್ಗೆ ಪರಿಶೀಲಿಸಿ ಗ್ರಾಮದಲ್ಲಿ ಆಶ್ರಯ ಯೋಜನೆಗೆ ಅವಶ್ಯಕತೆ ಇದ್ದಲ್ಲಿ ಲಭ್ಯ ಜಮೀನು ಕಾಯ್ದಿರಿಸಲು ಕ್ರಮ ವಹಿಸಲಾಗುತ್ತದೆ. ಸರ್ಕಾರಿ ಜಮೀನಿನ ಅಕ್ರಮ ಒತ್ತುವರಿ ತೆರವುಗೊಳಿ ಆಧಾರ್ ಕಾರ್ಡಿನ ಅನುಕೂಲತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದ್ದಾರೆ.

    ಅಧಿಕಾರಿಗಳಿಗೆ ನಿರ್ದೇಶನ
    ಜಿಲ್ಲಾಧಿಕಾರಿಗಳ ಗ್ರಾಮ ಭೇಟಿಯ ಬಗ್ಗೆ ಜನರಲ್ಲಿ ಸಾಕಷ್ಟು ನಿರೀಕ್ಷೆ ಇರುತ್ತದೆ. ಅದರಂತೆ ಕಾರ್ಯವಾಗಬೇಕು. ಗ್ರಾಮ ಭೇಟಿ ದಿನಂದು ಎಲ್ಲಾ ಅಧಿಕಾರಿಗಳು ಕಡ್ಡಾಯ ಹಾಜರಾಗಬೇಕು. ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಸಾಧ್ಯವಾದಷ್ಟು ಸ್ಥಳದಲ್ಲಿಯೇ ಅರ್ಜಿ ವಿಲೇವಾರಿಗೆ ಒತ್ತು ಕೊಡಬೇಕು ಎಂದು ಜಿಲ್ಲಾಧಿಕಾರಿಗಳು ಎಲ್ಲ ಅಧಿಕಾರಿಗಳಿಗೆ ಸೂಚನೆಯನ್ನ ಅವರು ನೀಡಿದ್ದಾರೆ.

    ಗ್ರಾಮದ ಮಾಹಿತಿ ಹೀಗಿದೆ
    ಬಿದರಕುಂದಿ ಗ್ರಾಮದಲ್ಲಿ 1755 ಪರುಷರು ಹಾಗೂ 1655 ಮಹಿಳೆಯರು ಸೇರಿ ಒಟ್ಟು 3410 ಜನಸಂಖ್ಯೆ ಇದೆ. ಸಾಕ್ಷರತಾ ಪ್ರಮಾಣ ಶೇ.75ರಷ್ಟಿದೆ. 46 ಜನ ವೃದ್ದಾಪ್ಯ ವೇತನ, 94 ಜನರು ವಿಕಲಚೇತನರ ವೇತನ, 152 ಜನರು ವಿಧವಾ ವೇತನ, 210 ಜನರು ಸಂದ್ಯಾ ಸುರಕ್ಷಾ ವೇತನ, 10 ಜನರು ಮನಸ್ವಿನಿ ವೇತನ ಪಡೆಯುತ್ತಿದ್ದಾರೆ. 101 ಅಂತ್ಯೋದಯ, 671 ಬಿಪಿಎಲ್ ಹಾಗೂ 30 ಎಪಿಎಲ್ ಸೇರಿ ಒಟ್ಟು 802 ಪಡಿತರ ಚೀಟಿಗಳಿವೆ. ಗ್ರಾಮ್ ಒನ್ ಕೇಂದ್ರವಿದೆ. 267 ನಲ್ಲಿ ಸಂಪರ್ಕ ನೀಡಲಾಗಿದೆ.

    ಇದನ್ನೂ ಓದಿ: Madhavananda Prabhu: ಬ್ರಿಟೀಷರ ಎದೆ ನಡುಗಿಸಿದ್ದ ವಿಜಯಪುರದ ಸಂತ! 27 ಬಾರಿ ಜೈಲುವಾಸ ಅನುಭವಿದ್ದ ಮಾಧವಾನಂದ ಪ್ರಭು

    ಈ ಸೌಲಭ್ಯಗಳೆಲ್ಲ ಇರಬೇಕು
    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಗ್ರಾಮದಲ್ಲಿನ ಅಂಗನವಾಡಿಗಳು ಸರಿಯಾಗಿ ಕಾರ್ಯನಿರ್ವಹಿಸಬೇಕು. ಗರ್ಭಿಣಿಯರಿಗೆ ಆರೋಗ್ಯ ತಪಾಸಣೆಗೆ ಏರ್ಪಾಡು ಮಾಡಬೇಕು. ಜಲಜೀವನ ಮಿಷನ್ ಯೋಜನೆಯ ಅನುಷ್ಠಾನದ ಬಗ್ಗೆ ಪರಿಶೀಲಿಸಬೇಕು. ಗ್ರಾಮಸ್ಥರಿಗೆ ಪ್ರೇರೇಪಣೆ ನೀಡಿ ಕೃಷಿ ಹೊಂಡ ನಿರ್ಮಾಣದ ಬಗ್ಗೆ ತಿಳಿಸಬೇಕು. ಗ್ರಾಮದ ವಿಕಲಚೇತನರಿಗೆ ಗುರುತಿನ ಚೀಟಿ ನೀಡಲು ಕ್ರಮ ವಹಿಸಬೇಕು ಎಂದು ಸೂಚಿಸಿದ್ದಾರೆ.

    ಇದನ್ನೂ ಓದಿ: Almatti: ಆಲಮಟ್ಟಿಯಲ್ಲಿ ಮಾಯಾಲೋಕ! ಇಲ್ಲಿದೆ ನೋಡಿ ವಿಡಿಯೋ

    ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳು ಭಾಗಿ, ಸ್ಥಳದಲ್ಲೇ ಪರಿಹಾರ
    ಅಪರ ಜಿಲ್ಲಾಧಿಕಾರಿಗಳಾದ ರಮೇಶ ಕಳಸದ ಸೇರಿದಂತೆ ವಿಜಯಪುರ ಸಹಾಯಕ ಆಯುಕ್ತರಾದ ಬಲರಾಮ ಲಮಾಣಿ, ಜಿಲ್ಲಾ ಪಂಚಾಯತ್, ಕೃಷಿ, ತೋಟಗಾರಿಕೆ, ಪದವಿಪೂರ್ವ, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸ್ಥಳದಲ್ಲೇ ಪರಿಹಾರವನ್ನು ನೀಡಲಾಗುತ್ತದೆ.

    ವರದಿ: ಪ್ರಶಾಂತ ಹೂಗಾರ ನ್ಯೂಸ್18 ಕನ್ನಡ ವಿಜಯಪುರ.
    Published by:guruganesh bhat
    First published: