Vijayapura News: ವಿದ್ಯಾರ್ಥಿಗಳೇ, ಡಿಪ್ಲೋಮಾ ಓದಿರಿ, ಸ್ಕಾಲರ್​ಶಿಪ್ ಪಡೆಯಿರಿ; ಹೀಗೆ ಅರ್ಜಿ ಹಾಕಿ

ಹಾಗಾದರೆ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಅಗತ್ಯ ಅರ್ಹತೆಗಳೇನು? ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಲ್ಲ ವಿವರ ಇಲ್ಲಿದೆ ನೋಡಿ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ವಿಜಯಪುರ: 2022-23ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ (Diploma Course) ಕಲಿಕೆಗಾಗಿ 44 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಡಿಪ್ಲೋಮಾ ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ.2500ರವರೆಗೆ ಶಿಷ್ಯವೇತನ (Scholarship) ನೀಡಲಾಗುತ್ತದೆ. ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು. ಹಾಗಾದರೆ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಅಗತ್ಯ ಅರ್ಹತೆಗಳೇನು? ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಲ್ಲ ವಿವರ ಇಲ್ಲಿದೆ ನೋಡಿ.

    ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಭಾಷೆಯನ್ನು ಒಂದು ವಿಷಯವಾಗಿ ಅಧ್ಯಯನ ಮಾಡಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಅರ್ಹತೆಗಳೇನು?
    ದಿನಾಂಕ: 01-07-2022 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ರ ವಯೋಮಿತಿಯಲ್ಲಿರಬೇಕು.  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15 ರಿಂದ 25 ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೋಢೀಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತವೆ.

    ಅರ್ಹ ಅಭ್ಯರ್ಥಿಗಳನ್ನು ಹೀಗೆ ಆಯ್ಕೆ ಮಾಡುತ್ತಾರೆ
    ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ, ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ ಮತ್ತು ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರಲ್ಲಿ ಕೋರ್ಸಗಳು ಲಭ್ಯವಿರುತ್ತವೆ. ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್​ಗಾಗಿ ಕರೆಯಲಾಗುವುದು.

    ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಡೌನ್​ಲೋಡ್ ಮಾಡಿಕೊಳ್ಳಲು ಲಿಂಕ್​ಗಾಗಿ ಇಲ್ಲಿ ಕ್ಲಿಕ್ ಮಾಡಿ

    ಇದನ್ನೂ ಓದಿ: Belagavi: ಈ ಸರ್ಕಾರಿ ಶಾಲೇಲಿ ಕಲಿಯಲು ಪುಣ್ಯ ಮಾಡಿರಬೇಕು! ಬೆಳಗಾವಿ ಶಾಲೆಯ ವಿಡಿಯೋ ನೋಡಿ

    ಸಂಪರ್ಕ ಸಂಖ್ಯೆಯೂ ಇದೆ
    ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಫಾರಂಗಳಿಗಾಗಿ ಈ ಕಚೇರಿಯ ದೂರವಾಣಿ ಸಂಖ್ಯೆ: 08352-251268 ಅಥವಾ 9902561441 ಯನ್ನು ಸಂಪರ್ಕಿಸಿ ಅರ್ಜಿಯನ್ನು ಪಡೆಯಬಹುದಾಗಿದೆ. ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಬೇಕಾದ ವಿಳಾಸ ಹೀಗಿದೆ.

    ಇದನ್ನೂ ಓದಿ: Belagavi: ನಾಯಿ ಬರ್ತ್​ಡೇ ಆಚರಣೆ ವಿಡಿಯೋ ನೋಡಿ! 1 ಕ್ವಿಂಟಲ್ ಕೇಕ್, 5 ಸಾವಿರ ಜನರಿಗೆ ಭರ್ಜರಿ ಊಟ!

    ವಿಳಾಸ ನೋಟ್ ಮಾಡಿಕೊಳ್ಳಿ
    ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ-587102, (ಕರ್ನಾಟಕ), ಇವರಿಗೆ ನೇರವಾಗಿ ಸಲ್ಲಿಸುವ ಕೊನೆಯ ದಿನಾಂಕ: 11-07-2022 ಇರುತ್ತದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ವರದಿ - ಪ್ರಶಾಂತ ಹೂಗಾರ, ವಿಜಯಪುರ
    Published by:guruganesh bhat
    First published: