Vijayapura Job Fair: ವಿಜಯಪುರದಲ್ಲಿ ಉದ್ಯೋಗ ಮೇಳ, ವಿಶೇಷಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ವಿಜಯಪುರ ಜಿಲ್ಲೆಯಲ್ಲಿ ವಿಶೇಷ ಚೇತನರಿಗಾಗಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಆಸಕ್ತ ವಿಶೇಷ ಚೇತನರು ತಮ್ಮ ವಿದ್ಯಾರ್ಹತೆ ಅನುಗುಣವಾಗಿ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ವಿಜಯಪುರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವಿಜಯಪುರ ಹಾಗೂ ಸಮರ್ಥನಂ ಅಂಗವಿಕಲರ ಸಂಸ್ಥೆ ಬೆಳಗಾವಿ ಇದರ ಸಹಯೋಗದಲ್ಲಿ ವಿಶೇಷ ಚೇತನರಿಗಾಗಿಯೇ ಉದ್ಯೋಗ ಮೇಳವನ್ನು (Job Fair) ಹಮ್ಮಿಕೊಳ್ಳಲಾಗಿದೆ. ವಿಜಯಪುರ ಜಿಲ್ಲೆಯ (Vijayapura) ಆಸಕ್ತ ವಿಶೇಷ ಚೇತನ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಗೆ ತಕ್ಕಂತೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕೂಡಲೇ ಅಭ್ಯರ್ಥಿಗಳು ಈ ಕೆಳಗಿನ ವಿವರಗಳಂತೆ ಸೂಕ್ತ ವಿವರಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹಾಗಾದರೆ ಈ ಉದ್ಯೋಗ ಮೇಳಕ್ಕೆ ಅರಜಿ ಸಲ್ಲಿಸುವುದು ಹೇಗೆ? ಇನ್ನೂ ಏನಾದರೂ ನಿಯಮಗಳಿವೆಯೇ? ಎಲ್ಲಿ ಉದ್ಯೊಗ ಮೇಳ ನಡೆಯಲಿದೆ? ಉದ್ಯೋಗ ಮೇಳ ನಡೆಯಲಿರುವ ದಿನಾಂಕವೇನು? ಎಲ್ಲ ವಿವರ ಇಲ್ಲಿದೆ ನೋಡಿ. 

    ಯಾರೆಲ್ಲ ಭಾಗವಹಿಸಬಹುದು?
    ಉದ್ಯೋಗ ಮೇಳದಲ್ಲಿ ಎಸ್ಸೆಸ್ಸೆಲ್​ಸಿ, ಪಿಯುಸಿ, ಐಟಿಐ ಮತ್ತು ಡಿಪ್ಲೋಮಾ ಹಾಗೂ ಯಾವುದೇ ಪದವಿ ಮತ್ತು ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ದಿವ್ಯಾಂಗ ಅಥವಾ ವಿಶೇಷ ಚೇತನ ಅಭ್ಯರ್ಥಿಗಳು ಮಾತ್ರ ಭಾಗವಹಿಸಬಹುದು.

    ಅರ್ಜಿ ಸಲ್ಲಿಕೆ ಹೀಗೆ
    ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ವೆಬ್ ಸೈಟ್​ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿ ಖಚಿತಪಡಿಸಿಕೊಳ್ಳಬೇಕು. ವೆಬ್​ಸೈಟ್​ನಲ್ಲಿ ನೋಂದಾಯಿಸಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

    ಉದ್ಯೋಗ ಮೇಳ ದಿನಾಂಕ
    ಉದ್ಯೋಗ ಮೇಳವು ಇದೇ ತಿಂಗಳು ಜುಲೈ 29ರಂದು ಬೆಳಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ.

    ನಡೆಯುವ ಸ್ಥಳ
    ರುಡ್ ಸೆಟ್ ಸಂಸ್ಥೆ ರಾಘವೇಂದ್ರ ಕಾಲೋನಿ, ಬಾಗಲಕೋಟ ರಸ್ತೆ ವಿಜಯಪುರ ಇಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

    ಬೇಕಾದ ದಾಖಲಾತಿಗಳು
    ಉದ್ಯೋಗ ಮೇಳದಲ್ಲಿ ಬಯೋಡೆಟಾದ ಕನಿಷ್ಠ 4 ಪ್ರತಿಗಳು, ಭಾವಚಿತ್ರಗಳು 4, ಶೈಕ್ಷಣಿಕ ಅರ್ಹತೆಯ ನಕಲು ಪ್ರತಿಗಳು, ಆಧಾರ್ ಕಾರ್ಡ್ ಹಾಗೂ ಅಂಗವಿಕಲ ಪ್ರಮಾಣ ಪತ್ರಗಳನ್ನೊಳಗೊಂಡಂತೆ ಸಂದರ್ಶನಕ್ಕೆ ಹಾಜರಾಗಬೇಕು.

    ಇದನ್ನೂ ಓದಿ: Krishna River Origin Video: ಕೃಷ್ಣಾ ನದಿ ಉಗಮದ ಅಪರೂಪದ ವಿಡಿಯೋ ಇಲ್ಲಿದೆ, ಕಣ್ತುಂಬಿಸಿಕೊಳ್ಳಿ!

    ಹೆಚ್ಚಿನ ಮಾಹಿತಿಗಾಗಿ ಯಾರನ್ನು ಸಂಪರ್ಕಿಸಬಹುದು?
    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು.

    ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ದೂರವಾಣಿ ಸಂಖ್ಯೆ 08352-250383/ 9148157888/ 9945000793 ಮೂಲಕ ಸಂಪರ್ಕಿಸಲು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ವಿಜಯಪುರದ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

    ಇದನ್ನೂ ಓದಿ: Vijayapura: ಕೈಬೀಸಿ ಕರೆಯುವ ಪುಟ್ಟಪುಟ್ಟ ಜಲಪಾತಗಳು! ವೀಡಿಯೋ ನೋಡಿ

    ವಿಜಯಪುರ ಜಿಲ್ಲೆಯಲ್ಲಿ ವಿಶೇಷ ಚೇತನರಿಗಾಗಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಆಸಕ್ತ ವಿಶೇಷ ಚೇತನರು ತಮ್ಮ ವಿದ್ಯಾರ್ಹತೆ ಅನುಗುಣವಾಗಿ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ವಿನಂತಿ ಮಾಡಲಾಗಿದೆ.
    Published by:guruganesh bhat
    First published: