Vijayapura News: ವಿದ್ಯಾರ್ಥಿ ರಿಯಾಯತಿ ಬಸ್‌ಪಾಸ್ ವಿತರಣೆ ಪ್ರಾರಂಭ; ಹೀಗೆ ಅಪ್ಲೈ ಮಾಡಿ

ಈಗಾಗಲೇ ಉಚಿತವಾಗಿ ಪ್ರಯಾಣಿಸಲು ನೀಡಿದ ಕಾಲಾವಕಾಶ ಮುಗಿದಿದ್ದು, ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಪಾಸ್ ಕೌಂಟರ್​ಗಳಿಗೆ ಸಂಪರ್ಕಿಸಿ, ತಮ್ಮ ಪಾಸ್ ಅವಧಿಯನ್ನು ವಿಸ್ತರಣೆ ಮಾಡಿಕೊಳ್ಳಬಹುದಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ವಿಜಯಪುರ: ವಿದ್ಯಾರ್ಥಿಗಳ ಅನುಕೂಲಕ್ಕಾಗಿ 2022-23ನೇ ಸಾಲಿನಲ್ಲಿ ಸೇವಾ ಸಿಂಧು ಯೋಜನೆಯಡಿ ವಿದ್ಯಾರ್ಥಿಗಳಿಗೆ ರಿಯಾಯತಿ ಬಸ್ ಪಾಸ್ ಅರ್ಜಿ ಪಾರಂಭವಾಗಿದೆ. ಎಲ್ಲಾ ವರ್ಗದ ವಿದ್ಯಾರ್ಥಿಗಳು ಸೇವಾ ಸಿಂಧು ಯೋಜನೆಯಡಿ (Seva Sindhu) ವಿದ್ಯಾರ್ಥಿಗಳು ರಿಯಾಯತಿ ಪಾಸ್‌ಗಳಿಗೆ ಅರ್ಜಿ ಸಲ್ಲಿಸಿ, ಅವಶ್ಯಕ ದಾಖಲೆಗಳನ್ನು ಹಾಗೂ ನಿಗದಿಪಡಿಸದ ಪಾಸ್ ದರವನ್ನು ತುಂಬಿಸಿ ಬಸ್ ಪಾಸ್ (Student Bus Pass) ಪಡೆದುಕೊಳ್ಳಲು ವಿಜಯಪುರ ಜಿಲ್ಲೆಯ (Vijayapura Students) ವಿದ್ಯಾರ್ಥಿಗಳಿಗೆ ಕೋರಲಾಗಿದೆ. ಈಗಾಗಲೇ ಶಾಲಾ ಕಾಲೇಜುಗಳು ಪ್ರಾರಂಭವಾಗಿದ್ದು ಸಾಕಷ್ಟು ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಬಸ್ ಪಾಸ್ ಸಮಸ್ಯೆಯಾಗಿತ್ತು. ಸದ್ಯ ಸೇವಾ ಸಿಂಧು ಯೋಜನೆಯಡಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಸ್ ಪಾಸ್ ನೀಡಲಾಗುತ್ತಿದ್ದು ಇದರ ಸದುಪಯೋಗವನ್ನ ವಿದ್ಯಾರ್ಥಿಗಳು ಪಡೆದುಕೊಳ್ಳುವಂತೆ ಮನವಿ ಮಾಡಲಾಗಿದೆ. 

  ಹೆಚ್ಚಿನ ಮಾಹಿತಿಗೆ ವಿಜಯಪುರ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕಚೇರಿ ಸಂಖ್ಯೆಗೆ ಕರೆಮಾಡಬಹುದಾಗಿದೆ. ದೂರವಾಣಿ ಸಂಖ್ಯೆ ಇಲ್ಲಿದೆ: 7760992252

  ಶಾಲಾ ಕಾಲೇಜು ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಂಡು ಉಚಿತ ರಿಯಾಯತಿ ಬಸ್ ಪಾಸ್‌ಗಳನ್ನು ಪಡೆಯಲು ಕೋರಲಾಗಿದೆ.

  ಬಸ್ ಪಾಸ್ ವಿಸ್ತರಿಸಿಕೊಳ್ಳಿ
  ಅದರಂತೆ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಜುಲೈ 17ರವರೆಗೆ ಉಚಿತವಾಗಿ ಪ್ರಯಾಣಿಸಲು ಹಾಗೂ ಆಗಸ್ಟ್-2022ರವರೆಗೆ ಎರಡು ತಿಂಗಳ ಪಾಸ್ ಮೊತ್ತವನ್ನು ಪಾವತಿಸಿ, ಬಸ್ ಪಾಸ್ ಅವಧಿಯನ್ನು ವಿಸ್ತರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

  ಇದನ್ನೂ ಓದಿ: Kittur Rani Chennamma: ಕಿತ್ತೂರು ರಾಣಿ ಚೆನ್ನಮ್ಮ ಜನ್ಮಸ್ಥಳ ಪಾಳುಬಿದ್ದಿದೆ! ಇಲ್ಲಿದೆ ನೋಡಿ ವಿಡಿಯೋ

  ಈಗಾಗಲೇ ಉಚಿತವಾಗಿ ಪ್ರಯಾಣಿಸಲು ನೀಡಿದ ಕಾಲಾವಕಾಶ ಮುಗಿದಿದ್ದು, ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಪಾಸ್ ಕೌಂಟರ್​ಗಳಿಗೆ ಸಂಪರ್ಕಿಸಿ, ತಮ್ಮ ಪಾಸ್ ಅವಧಿಯನ್ನು ವಿಸ್ತರಣೆ ಮಾಡಿಕೊಳ್ಳಬಹುದಾಗಿದೆ.

  ಇದನ್ನೂ ಓದಿ: Krishna River Origin Video: ಕೃಷ್ಣಾ ನದಿ ಉಗಮದ ಅಪರೂಪದ ವಿಡಿಯೋ ಇಲ್ಲಿದೆ, ಕಣ್ತುಂಬಿಸಿಕೊಳ್ಳಿ!

  ಇಲ್ಲವೇ ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಿ, ಹೊಸ ಬಸ್ ಪಾಸ್ ಪಡೆದುಕೊಳ್ಳಬಹುದಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
  Published by:guruganesh bhat
  First published: