• ಹೋಂ
  • »
  • ನ್ಯೂಸ್
  • »
  • ವಿಜಯಪುರ
  • »
  • Vijayapura News: ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನೀಡುತ್ತೆ ಸಾಲ; ಹೀಗೆ ಅರ್ಜಿ ಹಾಕಿ

Vijayapura News: ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನೀಡುತ್ತೆ ಸಾಲ; ಹೀಗೆ ಅರ್ಜಿ ಹಾಕಿ

ಡಿ. ದೇವರಾಜ ಅರಸು

ಡಿ. ದೇವರಾಜ ಅರಸು

ಸ್ವಯಂ ಉದ್ಯೋಗಕ್ಕಾಗಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ ರೂ. 2 ಲಕ್ಷಗಳವರೆಗೆ ಆರ್ಥಿಕ ನೆರವು ಸಿಗಲಿದೆ. ಹೇಗೆ ಅರ್ಜಿ ಸಲ್ಲಿಸುವುದು ಎಲ್ಲ ವಿವರ ಇಲ್ಲಿದೆ.

  • News18 Kannada
  • 3-MIN READ
  • Last Updated :
  • Vijayapura
  • Share this:

    ವಿಜಯಪುರ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯಡಿ (Self Employment Loan Facility) ಸೌಲಭ್ಯ ಪಡೆಯ ಬಯಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಸದರಿ ಅರ್ಜಿಗಳನ್ನು ಅಧಿಕೃತ ಜಾಲತಾಣದಲ್ಲಿ ಸಲ್ಲಿಸಬಹುದು. ಸ್ವಯಂ ಉದ್ಯೋಗಕ್ಕಾಗಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ ರೂ. 2 ಲಕ್ಷಗಳವರೆಗೆ ಆರ್ಥಿಕ ನೆರವು ಸಿಗಲಿದೆ.  ಗರಿಷ್ಠ ಶೇ.15ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಸಾಲ ಸೌಲಭ್ಯ (Loan Facility) ಪಡೆಯಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು.


    ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ 98,000 ರೂ. ಪಟ್ಟಣ ಪ್ರದೇಶದವರಿಗೆ 1,20,000 ರೂ. ಒಳಗಿರಬೇಕು, ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.


    ಈ ನಿಯಮಗಳೂ ಇವೆ!
    ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಚಾಲ್ತಿಯಲ್ಲಿರುವ ಜಾತಿ ಆದಾಯ ಪ್ರಮಾಣ ಪತ್ರ ನೀಡಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.


    ಅರ್ಜಿ ಸಲ್ಲಿಸಲು ಇಚ್ಚಿಸುವ ಹಿಂದುಳಿದ ವರ್ಗದ ಅರ್ಜಿದಾರರು ನಿಗಮದ ವೆಬ್​ಸೈಟ್​ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.


    ಇದನ್ನೂ ಓದಿ: Krishna River Origin Video: ಕೃಷ್ಣಾ ನದಿ ಉಗಮದ ಅಪರೂಪದ ವಿಡಿಯೋ ಇಲ್ಲಿದೆ, ಕಣ್ತುಂಬಿಸಿಕೊಳ್ಳಿ!


    ಹೆಚ್ಚಿನ ಮಾಹಿತಿಯನ್ನು ಪಡೆಯಲು ನಿಗಮದ ಸಹಾಯವಾಣಿ ಸಂಖ್ಯೆ:08352-258128


    ಅಥವಾ ಆಯಾ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್​ಸೈಟ್​ನಲ್ಲಿ ನೀಡಲಾಗಿದ್ದು ಅದರಂತೆ ಸಂಪರ್ಕಿಸಬಹುದು. ವೆಬ್​ಸೈಟ್ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.


    ಇದನ್ನೂ ಓದಿ: Belagavi: ಆಸ್ಪತ್ರೆ ಎಂದರೆ ಮಕ್ಕಳು ಖುಷ್! ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಏನಿದು ಜಾದೂ?


    ಆನ್​ಲೈನ್​ ಮೂಲಕ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ 24 ರೊಳಗೆ ಸುವಿಧಾ ತಂತ್ರಾಂಶದಲ್ಲಿ ಅರ್ಜಿ ಪ್ರತಿಯೊಂದಿಗೆ ಅಗತ್ಯ ದಾಖಲಾತಿಗಳೊಂದಿಗೆ ನಿಗಮದ ಜಿಲ್ಲಾ ಕಛೇರಿಗೆ ಸಲ್ಲಿಸಲು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ವರದಿ: ಪ್ರಶಾಂತ್ ಹೂಗಾರ್,  ನ್ಯೂಸ್ 18 ಕನ್ನಡ ವಿಜಯಪುರ

    Published by:ಗುರುಗಣೇಶ ಡಬ್ಗುಳಿ
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು