ವೃಷಭ ರಾಶಿ: ವೃಷಭ ರಾಶಿಯಲ್ಲಿ ಶುಕ್ರನ ಸಂಚಾರವು ಮಂಗಳಕರ ಮತ್ತು ಫಲದಾಯಕವಾಗಿರುತ್ತದೆ ಎನ್ನಲಾಗುತ್ತದೆ. ಏಕೆಂದರೆ ನಿಮ್ಮ ರಾಶಿಯ ಅಧಿಪತಿ ಶುಕ್ರ. ಅಲ್ಲದೆ, ಶುಕ್ರನು ನಿಮ್ಮ ರಾಶಿಯಿಂದ 11 ನೇ ಮನೆಯಲ್ಲಿ ಸಾಗಲಿದ್ದಾನೆ. ಇದನ್ನು ಆದಾಯ ಮತ್ತು ಲಾಭದ ಮನೆ ಎನ್ನಲಾಗುತ್ತದೆ. ಹೀಗಾಗಿ ಈ ಸಮಯದಲ್ಲಿ ನಿಮ್ಮ ಆದಾಯವು ಹೆಚ್ಚಾಗುತ್ತದೆ. ಕೆಲಸದ ಸ್ಥಳದಲ್ಲಿ ಹಿರಿಯರೊಂದಿಗೆ ಸಂಬಂಧದಲ್ಲಿ ಸುಧಾರಣೆ ಕಂಡುಬರುತ್ತದೆ.