ನಗರ ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆ ಕೂಂಬಿಂಗ್ ನಡೆಸಿ ಎರಡೂ ದಿನ ಕಳೆಯುವಷ್ಟರಲ್ಲಿ ಮತ್ತೆ ಗಾಲ್ಫ್ ಮೈದಾನದ ಖಾಸಗಿ ಶಾಲೆಯ ವಿಶಾಲವಾದ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಸ್ಥಳದಲ್ಲಿ ಕೇವಲ ಬೆರಳೆಣಿಕೆಯಷ್ಟು ಅರಣ್ಯ ಸಿಬ್ಬಂದಿ ಬಿಟ್ಟರೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರೇ ಇದ್ದಾರೆ. ಅರಣ್ಯ ಇಲಾಖೆಯ ಇಷ್ಟೊಂದು ಬೇಜವಾಬ್ದಾರಿತನಕ್ಕೆ ನಾಗರಿಕರು ಹಿಡಿಶಾಪ ಹಾಕುತ್ತಿದ್ದಾರೆ.
ಬೆಳಗಾವಿ ಗಾಲ್ಫ್‍ನಲ್ಲಿ ಕಣ್ಮರೆಯಾಗಿದ್ದ ಚಿರತೆ ಸೋಮವಾರ ಬೆಳಗ್ಗೆ ಸ್ಥಳೀಯರಿಗೆ ಪ್ರತ್ಯಕ್ಷವಾಗಿ ಕಾಣಿಸಿಕೊಂಡಿತ್ತು. ಈ ಮಾಹಿತಿಯ ಮೇರೆಗೆ ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಪೆÇಲೀಸರು ಕಾರ್ಯಾಚರಣೆ ಮಾಡಿದ್ದಾರೆ. ನುರಿತ ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಅರವಳಿಕೆಯ ತಜ್ಞರನ್ನು ಸಹ ಕಾರ್ಯಾಚರಣೆಗೆ ನಿಯೋಜನೆ ಮಾಡಲಾಗಿದ್ದು, ಮದ್ದು ನೀಡಿ ಎರಡ್ಮೂರು ದಿನದಲ್ಲಿ ಹಿಡಿಯಲಾಗುವುದು ಎಂದು ಭರವಸೆ ನೀಡಿದರು.
ನಗರ ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆ ಕೂಂಬಿಂಗ್ ನಡೆಸಿ ಎರಡೂ ದಿನ ಕಳೆಯುವಷ್ಟರಲ್ಲಿ ಮತ್ತೆ ಗಾಲ್ಫ್ ಮೈದಾನದ ಖಾಸಗಿ ಶಾಲೆಯ ವಿಶಾಲವಾದ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಸ್ಥಳದಲ್ಲಿ ಕೇವಲ ಬೆರಳೆಣಿಕೆಯಷ್ಟು ಅರಣ್ಯ ಸಿಬ್ಬಂದಿ ಬಿಟ್ಟರೆ ಹೆಚ್ಚಿನ ಸಂಖ್ಯೆಯಲ್ಲಿ ಪೆÇಲೀಸರೇ ಇದ್ದಾರೆ. ಅರಣ್ಯ ಇಲಾಖೆಯ ಇಷ್ಟೊಂದು ಬೇಜವಾಬ್ದಾರಿತನಕ್ಕೆ ನಾಗರಿಕರು ಹಿಡಿಶಾಪ ಹಾಕುತ್ತಿದ್ದಾರೆ.