ಎನ್ಜಿಒ ಒಂದರಲ್ಲಿ ಕೆಲಸ ಮಾಡುತ್ತಿದ್ದ ಜೋಸ್, ಮೇಕಲಮರಡಿ ಗ್ರಾಮದಲ್ಲಿಯೇ ವಾಸವಿದ್ದರು. ಜಲಾನಯನ ಅಭಿವೃದ್ಧಿ ಮತ್ತು ಸುಧಾರಿತ ಕೃಷಿ ಪದ್ಧತಿಯಲ್ಲಿ ರೈತರಿಗೆ ತರಬೇತಿ ನೀಡುತ್ತಿದ್ದರು. ಅಲ್ಲದೆ ಜೋಸ್ ಗ್ರಾಮದ ಬಡ ಮಹಿಳೆಯರಿಗೆ ಸ್ಥಿರ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ಯೋಚಿಸಿದರು. ಇದಕ್ಕಾಗಿ ಅವರು ತಮ್ಮ ಸ್ನೇಹಿತ ಕರಕುಶಲಿ ಎನ್.ಬಿ.ಗೋಪಿಕೃಷ್ಣ ಅವರನ್ನು ಭೇಟಿ ಮಾಡಿದರು.