ಕೌಶಿಕ್ ತಲೆಗೆ ಗಂಭೀರ ಗಾಯವಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರ ಯಡವಟ್ಟಿನಿಂದಲೇ ಘಟನೆ ನಡೆದಿದೆ ಅಂತ ಕೌಶಿಕ್ ಪೋಷಕರು ಆರೋಪಿಸಿದ್ದಾರೆ. ಯುವಕರನ್ನು ಅಟ್ಟಾಡಿಸಿಕೊಂಡು ಹೋಗಿದ್ದಾರೆ, ಆಗ ಭಯಗೊಂಡು ವೇಗವಾಗಿ ಹೋಗಿ ಡಿಕ್ಕಿ ಹೊಡೆದಿದ್ದಾನೆ ಎಂದು ಆರೋಪಿಸಿದ್ದಾರೆ.