Bengaluru: 12 ವರ್ಷದಿಂದ ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಮಹಿಳೆ ಅಂದರ್, ಹಿಂದೂ ಅಂತ ಸುಳ್ಳು ಬೇರೆ ಹೇಳಿದ್ರಂತೆ!
ರೋನಿ ಬೇಗಂ ಎಂಬಾಕೆ 2006 -2007 ರಲ್ಲಿ ಅಕ್ರಮವಾಗಿ ಗಡಿ ನುಸುಳಿ ಭಾರತದೊಳಕ್ಕೆ ಪ್ರವೇಶಿಸಿದ್ದಳು. ರೋನಿ ಬೇಗಂ 2015 ರಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾಳೆ. ಇಲ್ಲೇ ಕೆಲಸ ಮಾಡಿಕೊಂಡು ಯಾರಿಗೂ ತಿಳಿಯದ ಹಾಗೇ ನೋಡಿಕೊಂಡಿದ್ದಳು.
ಬಾಂಗ್ಲಾದೇಶದಿಂದ ಅಕ್ರಮವಾಗಿ ಬಂದು, ಇಲ್ಲಿ ಹಿಂದೂ ಆಗಿ ಭಾರತದಲ್ಲಿ ನೆಲೆಸಿದ್ದ ಮಹಿಳೆಯೊಬ್ಬರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಅಕ್ರಮವಾಗಿ ಭಾರತದ ಪೌರತ್ವ ಪಡೆದುಕೊಂಡಿದ್ದ ಮಹಿಳೆಯನ್ನು ಬ್ಯಾಡರಹಳ್ಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
2/ 6
ರೋನಿ ಬೇಗಂ ಎಂಬಾಕೆ 2006 -2007 ರಲ್ಲಿ ಅಕ್ರಮವಾಗಿ ಗಡಿ ನುಸುಳಿ ಭಾರತದೊಳಕ್ಕೆ ಪ್ರವೇಶಿಸಿದ್ದಳು. ರೋನಿ ಬೇಗಂ 2015 ರಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾಳೆ. ಇಲ್ಲೇ ಕೆಲಸ ಮಾಡಿಕೊಂಡು ಯಾರಿಗೂ ತಿಳಿಯದ ಹಾಗೇ ನೋಡಿಕೊಂಡಿದ್ದಳು.
3/ 6
ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ಟೈಲರಿಂಗ್ ಮಾಡಿಕೊಂಡಿದ್ದ ಸದರಿ ವಿದೇಶಿ ಮಹಿಳೆ, ನೀತಿನ್ ಕುಮಾರ್ ಎಂಬಾತನನ್ನು ಮುಂಬೈನಲ್ಲಿ ವಿವಾಹವಾಗಿದ್ದಳು. ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದ ರೋನಿ ಬೇಗಂ ತನ್ನ ಹೆಸರು ಬದಲಿಸಿಕೊಂಡಿದ್ದಳು.
4/ 6
ಪಾಯಲ್ ಗೋಷ್ ಎಂದು ಆಕೆಗೆ ಮರು ನಾಮಕರಣವಾಗಿತ್ತು. ನಕಲಿ ದಾಖಲೆ ಕೊಟ್ಟು ಭಾರತದ ಪ್ರಜೆಯಾಗಿ ದಾಖಲೆ ಮಾರ್ಪಾಡು ಮಾಡಿಕೊಂಡಿದ್ದಳು. ಬಾಂಗ್ಲಾಗೆ ಪ್ರಯಾಣ ಮಾಡುವಾಗ ಏರ್ ಪೋರ್ಟ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾಳೆ
5/ 6
ನಕಲಿ ದಾಖಲೆ ಮುಖಾಂತರ ಓಟರ್ ಐಡಿ, ಆಧಾರ್ ಕಾರ್ಡ್ ಸಹ ರೋನಿ ಬೇಗಂ ಯಾನಿ ಪಾಯಲ್ ಗೋಷ್ ಪಶ್ಚಿಮ ಬಂಗಾಳದ ಏರ್ ಪೋರ್ಟ್ನಲ್ಲಿ ಸಿಕ್ಕಿ ಹಾಕಿಕೊಂಡಿದ್ದಾಳೆ .
6/ 6
FRRO ಸೂಚನೆ ಮೇರೆಗೆ ಬ್ಯಾಡರಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಒಂದೂವರೆ ವರ್ಷದ ನಂತರ ರೋನಿ ಬೇಗಂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ.