ಬೆಂಗಳೂರಿನ ನಾಗರಿಕರೇ ಗಮನಿಸಿ, ಹೊಸ ವರ್ಷದಿಂದ ಹೊಸ ಅವಕಾಶವೊಂದು ನಿಮಗೆ ದೊರೆಯಲಿದೆ. ಬೆಂಗಳೂರಿನ ರಸ್ತೆಗಳನ್ನು ಸುಧಾರಿಸಲು ಈ ಸೌಲಭ್ಯವನ್ನು ನೀವು ಬಳಸಿಕೊಳ್ಳಬಹುದಾಗಿದೆ. (ಸಾಂದರ್ಭಿಕ ಚಿತ್ರ)
2/ 8
ಬಿಬಿಎಂಪಿಯ ಫಿಕ್ಸ್ ಮೈ ಸ್ಟ್ರೀಟ್ ಮೊಬೈಲ್ ಅಪ್ಲಿಕೇಶನ್ ಜನವರಿ 1, 2023 ರಿಂದ ಸಾರ್ವಜನಿಕರಿಗೆ ಲಭ್ಯವಾಗಲಿದೆ. ಈ ಆ್ಯಪ್ ಮೂಲಕ ಸಾರ್ವಜನಿಕರು ರಸ್ತೆಗುಂಡಿಗಳ ಬಗ್ಗೆ ಮಾಹಿತಿ ನೀಡಬಹುದಾಗಿದೆ. (ಸಾಂದರ್ಭಿಕ ಚಿತ್ರ)
3/ 8
ಬೆಂಗಳೂರು ಫಿಕ್ಸ್ ಮೈ ಸ್ಟ್ರೀಟ್ ಅಪ್ಲಿಕೇಶನ್ ಅನ್ನು ಮೂಲತಃ 2017 ರಲ್ಲಿ ಪ್ರಾರಂಭಿಸಲಾಗಿತ್ತು. ಆದರೆ ತಾಂತ್ರಿಕ ದೋಷಗಳ ದೂರುಗಳ ನಂತರ ಸಾರ್ವಜನಿಕ ಬಳಕೆಗಾಗಿ 2019 ರಲ್ಲಿ ಮುಚ್ಚಲಾಗಿತ್ತು. (ಸಾಂದರ್ಭಿಕ ಚಿತ್ರ)
4/ 8
ಬೆಂಗಳೂರಿನ ರಸ್ತೆಗುಂಡಿಗಳನ್ನು ಮುಚ್ಚಲು ಡಿಸೆಂಬರ್ 31 ಕ್ಕೆ ಹೊಸ ಗಡುವನ್ನು ನಿಗದಿಪಡಿಸಲಾಗಿದೆ. (ಸಾಂದರ್ಭಿಕ ಚಿತ್ರ)
5/ 8
ಬೆಂಗಳೂರಿನ ರಸ್ತೆಗಳ ನಿರ್ವಹಣೆಗೆ ಬಿಬಿಎಂಪಿ ಎಂಜಿನಿಯರ್ಗಳು ಜವಾಬ್ದಾರರಾಗಿದ್ದಾರೆ. ನಿರ್ಲಕ್ಷ್ಯ ತೋರುವವರ ವಿರುದ್ಧ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)
6/ 8
ಇಡೀ ವಿಶ್ವದಲ್ಲೇ ಬೆಂಗಳೂರು ರಸ್ತೆ ಸಂಚಾರ ನಿಯಮ ಉಲ್ಲಂಘನೆಯಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಸ್ವತಃ ನಗರ ಸಂಚಾರ ಪೊಲೀಸ್ ವಿಶೇಷ ಆಯುಕ್ತ ಎಂ.ಎ.ಸಲೀಂ ಮಾಹಿತಿ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)
7/ 8
ಅಲ್ಲದೇ ಈ ಕುರಿತ ಅಂಕಿ ಅಂಶಗಳನ್ನೂ ವಿವರಿಸಿರುವ ಅವರು, ಬೆಂಗಳೂರಿನಲ್ಲಿ 2022ರ ಜನವರಿಯಿಂದ 96 ಲಕ್ಷ ರಸ್ತೆ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ಇವುಗಳಿಂದ ₹174 ಕೋಟಿ ದಂಡ ವಸೂಲಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.(ಸಾಂದರ್ಭಿಕ ಚಿತ್ರ)
8/ 8
ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಂಡು ಕಾರಿಡಾರ್ ವ್ಯವಸ್ಥೆಯಲ್ಲಿ ಸಿಗ್ನಲ್ ಅಳವಡಿಕೆ ಮಾಡಲಾಗುತ್ತದೆ ಎಂದು ಎಂ.ಎ.ಸಲೀಂ ತಿಳಿಸಿದ್ದಾರೆ. ಒಟ್ಟಾರೆ ಬೆಂಗಳೂರಿನ ಟ್ರಾಫಿಕ್ ಮತ್ತು ರಸ್ತೆಗುಂಡಿ ಸಮಸ್ಯೆಗಳ ಪರಿಹಾರಕ್ಕೆ ಎಡಬಿಡದೇ ಪ್ರಯತ್ನ ಕೈಗೊಳ್ಳಲಾಗುತ್ತಿದೆ. (ಸಾಂದರ್ಭಿಕ ಚಿತ್ರ)