ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಸಂಚಾರಿ ನಿಯಮ ಉಲ್ಲಂಘನೆಯ ಕುರಿತು ಶಾಕಿಂಗ್ ಮಾಹಿತಿಯೊಂದು ಹೊರಬಿದ್ದಿದೆ. (ಸಾಂದರ್ಭಿಕ ಚಿತ್ರ)
2/ 8
ಇಡೀ ವಿಶ್ವದಲ್ಲೇ ಬೆಂಗಳೂರು ರಸ್ತೆ ಸಂಚಾರ ನಿಯಮ ಉಲ್ಲಂಘನೆಯಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಸ್ವತಃ ನಗರ ಸಂಚಾರ ಪೊಲೀಸ್ ವಿಶೇಷ ಆಯುಕ್ತ ಎಂ.ಎ.ಸಲೀಂ ಮಾಹಿತಿ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)
3/ 8
ಬೆಂಗಳೂರು ಸಂಚಾರ ದಟ್ಟಣೆಗೆ ಪರಿಹಾರ ಎಂಬ ವಿಷಯದ ಕುರಿತು ಬೆಂಗಳೂರು ಇಂಟರ್ನ್ಯಾಷನಲ್ ಸೆಂಟರ್ ಶುಕ್ರವಾರ ಏರ್ಪಡಿಸಿದ್ದ ಚರ್ಚೆಯೊಂದರಲ್ಲಿ ಬೆಂಗಳೂರು ನಗರ ಸಂಚಾರ ಪೊಲೀಸ್ ವಿಶೇಷ ಆಯುಕ್ತ ಎಂ.ಎ.ಸಲೀಂ ಈ ವಿಷಯ ತೆರೆದಿಟ್ಟಿದ್ದಾರೆ. (ಸಾಂದರ್ಭಿಕ ಚಿತ್ರ)
4/ 8
ಅಲ್ಲದೇ ಈ ಕುರಿತ ಅಂಕಿ ಅಂಶಗಳನ್ನೂ ವಿವರಿಸಿರುವ ಅವರು, ಬೆಂಗಳೂರಿನಲ್ಲಿ 2022ರ ಜನವರಿಯಿಂದ 96 ಲಕ್ಷ ರಸ್ತೆ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ಇವುಗಳಿಂದ ₹174 ಕೋಟಿ ದಂಡ ವಸೂಲಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.(ಸಾಂದರ್ಭಿಕ ಚಿತ್ರ)
5/ 8
ಜೊತೆಗೆ ಕೃತಕ ಬುದ್ಧಿಮತ್ತೆಯ ಮೂಲಕ ಬೆಂಗಳೂರು ಟ್ರಾಫಿಕ್ ಕಡಿಮೆ ಮಾಡುವ ಕುರಿತು ಸಹ ಅವರು ಕೆಲವು ವಿವರಣೆ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)
6/ 8
ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಂಡು ಕಾರಿಡಾರ್ ವ್ಯವಸ್ಥೆಯಲ್ಲಿ ಸಿಗ್ನಲ್ ಅಳವಡಿಕೆ ಮಾಡಲಾಗುತ್ತದೆ ಎಂದು ಎಂ.ಎ.ಸಲೀಂ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)
7/ 8
ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಬಸ್ಗಳನ್ನು ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುವುದು ಅಪಾಯ ತಂದೊಡ್ಡುತ್ತಿದೆ. ಇದನ್ನು ಸಹ ಶೀಘ್ರದಲ್ಲೇ ತಡೆಗಟ್ಟಲು ಕ್ರಮ ಕೈಗೊಳ್ಳುವುದಾಗಿ ಅವರು ಮಾಹಿತಿ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)
8/ 8
ರಸ್ತೆ ನಿಯಮ ಉಲ್ಲಂಘನೆಯ ಗಂಭೀರ ವಿಚಾರವೊಂದೇ ಅಲ್ಲದೇ ಬೆಂಗಳೂರಿನ ಪ್ರಯಾಣಿಕರನ್ನು ಕಂಗೆಡಿಸುತ್ತಿರುವ ಟ್ರಾಫಿಕ್ ಸಮಸ್ಯೆಯ ಕುರಿತು ಮಾಹಿತಿ ಈ ಚರ್ಚೆಯಲ್ಲಿ ಹೊರಬಿದ್ದಿದೆ. (ಸಾಂದರ್ಭಿಕ ಚಿತ್ರ)