ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಇಂದು ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (ಸಾಂದರ್ಭಿಕ ಚಿತ್ರ)
2/ 7
ಮುಂದಿನ 48 ಗಂಟೆಗಳ ಕುರಿತು ಸಹ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಜೊತೆಗೆ ಸಂಜೆ ಅಥವಾ ರಾತ್ರಿಯ ಹೊತ್ತಿನಲ್ಲಿ ಗುಡುಗು ಸಹಿತವಾಗಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)
3/ 7
ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ ಭಾಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. (ಸಾಂದರ್ಭಿಕ ಚಿತ್ರ)
4/ 7
ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಭಾಗಗಳಲ್ಲಿ ಹಗುರು ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಗಾಳಿ ಪ್ರತಿ ಗಂಟೆಗೆ 30-40 ಕಿಲೋ ಮೀಟರ್ ವೇಗವಾಗಿ ಬೀಸಲಿದೆ.
5/ 7
ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇಂದು ಮತ್ತು ನಾಳೆ ಈ ಭಾಗದಲ್ಲಿ ಮಳೆಯಾಗಿದೆ. (ಸಾಂದರ್ಭಿಕ ಚಿತ್ರ)
6/ 7
ಮೇ ಎರಡನೇ ವಾರದಲ್ಲಿ ಬಂಗಾಳಕೊಲ್ಲಿಯಲ್ಲಿ 'ಮೋಚಾ' ಎಂಬ ಹೆಸರಿನ ಚಂಡಮಾರುತ ರಚನೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)
7/ 7
ವಾಯುಭಾರ ಕುಸಿತ ಚಂಡಮಾರುತವಾಗಿ ಬದಲಾಗುವ ಪ್ರಬಲ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಇದೇ ವೇಳೆ ಸೈಕ್ಲೋನ್ ಮೋಚಾ ಕರ್ನಾಟಕದ ರಾಜಧಾನಿ ಬೆಂಗಳೂರಿನ ಮೇಲೆ ಭಾರೀ ಪರಿಣಾಮ ಬೀರಲಿದೆ ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ)
First published:
17
Bengaluru Rains: ಮುಂದಿನ 48 ಗಂಟೆಯ ಮಳೆ ಮುನ್ಸೂಚನೆ