Bengaluru To Hubballi: ಬೆಂಗಳೂರಿನಿಂದ ಉತ್ತರ ಕರ್ನಾಟಕ ಪ್ರಯಾಣ ಇನ್ನಷ್ಟು ಸುಲಭ!

ಉತ್ತರ ಕರ್ನಾಟಕದ ಭಾಗದ ಸಾರ್ವಜನಿಕರು ರಾಜ್ಯ ರಾಜಧಾನಿ ಬೆಂಗಳೂರಿಗೆ ಪ್ರಯಾಣಿಸಲು ಈ ರೈಲನ್ನು ಬಳಸಿಕೊಳ್ಳುವಂತೆ ಮನವಿ ಮಾಡಲಾಗಿದೆ.

First published:

  • 17

    Bengaluru To Hubballi: ಬೆಂಗಳೂರಿನಿಂದ ಉತ್ತರ ಕರ್ನಾಟಕ ಪ್ರಯಾಣ ಇನ್ನಷ್ಟು ಸುಲಭ!

    ಉತ್ತರ ಕರ್ನಾಟಕ ಮತ್ತು ರಾಜ್ಯ ರಾಜಧಾನಿ ಬೆಂಗಳೂರು ನಾಗರಿಕರಿಗೆ ಸಖತ್ ಸುದ್ದಿಯೊಂದು ಇಲ್ಲಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Bengaluru To Hubballi: ಬೆಂಗಳೂರಿನಿಂದ ಉತ್ತರ ಕರ್ನಾಟಕ ಪ್ರಯಾಣ ಇನ್ನಷ್ಟು ಸುಲಭ!

    ಬೆಂಗಳೂರಿನಿಂದ ಹುಬ್ಬಳ್ಳಿ ನಡುವೆ ಪ್ರಯಾಣಿಸುವ ಸಾರ್ವಜನಿಕರಿಗೆ ವಿಶೇಷ  ಎಕ್ಸ್​ಪ್ರೆಸ್ ರೈಲುಗಳನ್ನು ಓಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಈ ಕುರಿತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Bengaluru To Hubballi: ಬೆಂಗಳೂರಿನಿಂದ ಉತ್ತರ ಕರ್ನಾಟಕ ಪ್ರಯಾಣ ಇನ್ನಷ್ಟು ಸುಲಭ!

    ಹುಬ್ಬಳ್ಳಿ ಮತ್ತು ಬೆಂಗಳೂರು ನಡುವೆ ಮಾರ್ಚ್ 20ರಿಂದ ವಿಶೇಷ ಎಕ್ಸ್​ಪ್ರೆಸ್ ರೈಲುಗಳು ಸೇವೆ ಒದಗಿಸಲಿವೆ. ರಾತ್ರಿ 11:15ಕ್ಕೆ ಹುಬ್ಬಳ್ಳಿಯಿಂದ ಹೊರಡುವ ಈ ವಿಶೇಷ ರೈಲು ಬೆಳಗ್ಗೆ 6:50ಕ್ಕೆ ಬೆಂಗಳೂರನ್ನು ಸೇರಲಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Bengaluru To Hubballi: ಬೆಂಗಳೂರಿನಿಂದ ಉತ್ತರ ಕರ್ನಾಟಕ ಪ್ರಯಾಣ ಇನ್ನಷ್ಟು ಸುಲಭ!

    ಜೊತೆಗೆ ಬೆಂಗಳೂರಿನಿಂದ ರಾತ್ರಿ 11:15ಕ್ಕೆ ಈ ವಿಶೇಷ ರೈಲು ಹೊರಡಲಿದ್ದು ಬೆಳಗ್ಗೆ 7:30ಕ್ಕೆ ಹುಬ್ಬಳ್ಳಿ ರೈಲು ನಿಲ್ದಾಣವನ್ನು ತಲುಪಲಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Bengaluru To Hubballi: ಬೆಂಗಳೂರಿನಿಂದ ಉತ್ತರ ಕರ್ನಾಟಕ ಪ್ರಯಾಣ ಇನ್ನಷ್ಟು ಸುಲಭ!

    ಅಷ್ಟೇ ಅಲ್ಲ, ಇನ್ನೊಂದು ರೈಲು ಬೆಳಗ್ಗೆ 7:45ಕ್ಕೆ ಬೆಂಗಳೂರಿನಿಂದ(ರೈಲು ಸಂ : 07353) ಹೊರಟು ಮಧ್ಯಾಹ್ನ 2:30ಕ್ಕೆ ಹುಬ್ಬಳ್ಳಿ ತಲುಪಲಿದೆ. ಜೊತೆಗೆ ಹುಬ್ಬಳ್ಳಿಯಿಂದ 3:15ಕ್ಕೆ ಹೊರಡುವ ಇನ್ನೊಂದು ರೈಲು ರಾತ್ರಿ 11:10ಕ್ಕೆ ಬೆಂಗಳೂರು ರೈಲು ನಿಲ್ದಾಣ ತಲುಪಲಿದೆ.   (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Bengaluru To Hubballi: ಬೆಂಗಳೂರಿನಿಂದ ಉತ್ತರ ಕರ್ನಾಟಕ ಪ್ರಯಾಣ ಇನ್ನಷ್ಟು ಸುಲಭ!

    ಮಾರ್ಚ್ 20ರಿಂದ ಆರಂಭವಾಗಲಿರುವ ಈ ವಿಶೇಷ ರೈಲುಗಳು ಕರ್ಜಗಿ, ದಾವಣಗೆರೆ, ಬೀರೂರು, ತುಮಕೂರು ಹಾಗೂ ಯಶವಂತಪುರ ಮಾರ್ಗವಾಗಿ ಪ್ರಯಾಣ ಬೆಳೆಸಲಿವೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Bengaluru To Hubballi: ಬೆಂಗಳೂರಿನಿಂದ ಉತ್ತರ ಕರ್ನಾಟಕ ಪ್ರಯಾಣ ಇನ್ನಷ್ಟು ಸುಲಭ!

    ಈ ಮೂಲಕ ಉತ್ತರ ಕರ್ನಾಟಕದ ಭಾಗದ ಸಾರ್ವಜನಿಕರು ರಾಜ್ಯ ರಾಜಧಾನಿ ಬೆಂಗಳೂರಿಗೆ ಪ್ರಯಾಣಿಸಲು ಈ ರೈಲನ್ನು ಬಳಸಿಕೊಳ್ಳುವಂತೆ ಮನವಿ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES