Vande Bharat Express: ಬೆಂಗಳೂರು-ಹುಬ್ಬಳ್ಳಿ ವಂದೇ ಭಾರತ್ ಎಕ್ಸ್ಪ್ರೆಸ್ ಸ್ಪೀಡ್ ಬಗ್ಗೆ ಮಹತ್ವದ ಅಪ್ಡೇಟ್ ಬಹಿರಂಗ
ಕೆಲ ದಿನಗಳ ಹಿಂದೆ ಟ್ವೀಟ್ ಮಾಡಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಮ್ಮ ಧಾರವಾಡ-ಹುಬ್ಬಳ್ಳಿಯಿಂದ ಬೆಂಗಳೂರಿಗೆ ಅತ್ಯಾಧುನಿಕ ಅತಿವೇಗದ ವಂದೇ ಭಾರತ್ ರೈಲನ್ನು ಆರಂಭಿಸಲು ಕೇಂದ್ರ ಸರ್ಕಾರ ಮತ್ತು ರೈಲ್ವೆ ಇಲಾಖೆ ವೇಗವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದ್ದರು.
ಕರ್ನಾಟಕದಲ್ಲಿ ಹೊಸ ವರ್ಷಕ್ಕೆ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚರಿಸೋದು ಪಕ್ಕಾ ಆಗಿದೆ. ಹೊಸ ರೈಲಿನ ವೇಗ ಪರೀಕ್ಷೆಯೂ ಯಶಸ್ವಿಯಾಗಿ ನಡೆದಿದೆ. (ಸಾಂದರ್ಭಿಕ ಚಿತ್ರ)
2/ 8
ಹೌದು, ಬೆಂಗಳೂರು-ಹುಬ್ಬಳ್ಳಿ ವಂದೇ ಭಾರತ್ ರೈಲಿಗಾಗಿ ರೈಲು ಟ್ರ್ಯಾಕ್ನಲ್ಲಿ ವೇಗ ಪರೀಕ್ಷೆ ನಡೆಸಲಾಗಿದೆ. ಗಂಟೆಗೆ 120 ಕಿಲೋಮೀಟರ್ ವೇಗವಾಗಿ ಈ ಟ್ರ್ಯಾಕ್ನಲ್ಲಿ ಯಶಸ್ವಿಯಾಗಿ ಸಂಚರಿಸಿದೆ. (ಸಾಂದರ್ಭಿಕ ಚಿತ್ರ)
3/ 8
ಈ ಕುರಿತು ಕೇಂದ್ರ ಸಚಿವ, ಸಂಸದ ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿ ಖಚಿತಪಡಿಸಿದ್ದಾರೆ. ಅಲ್ಲದೇ ಮುಂದಿನ ವರ್ಷ ಅಂದರೆ 2023ರ ಮಾರ್ಚ್ ತಿಂಗಳಿನಿಂದಲೇ ಈ ರೈಲು ಸೇವೆ ಆರಂಭಿಸಲಿದೆ. (ಸಾಂದರ್ಭಿಕ ಚಿತ್ರ)
4/ 8
ಅಲ್ಲದೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬೆಂಗಳೂರು-ಹುಬ್ಬಳ್ಳಿ ನಡುವಿನ ವಂದೇ ಭಾರತ್ ರೈಲಿನ ವೇಗ ಪರೀಕ್ಷೆಯ ವಿಡಿಯೋವನ್ನು ಸಹ ಟ್ವೀಟ್ ಮಾಡಿದ್ದಾರೆ. (ಸಾಂದರ್ಭಿಕ ಚಿತ್ರ)
5/ 8
ಕೆಲ ದಿನಗಳ ಹಿಂದೆ ಟ್ವೀಟ್ ಮಾಡಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಮ್ಮ ಧಾರವಾಡ-ಹುಬ್ಬಳ್ಳಿಯಿಂದ ಬೆಂಗಳೂರಿಗೆ ಅತ್ಯಾಧುನಿಕ ಅತಿವೇಗದ ವಂದೇ ಭಾರತ್ ರೈಲನ್ನು ಆರಂಭಿಸಲು ಕೇಂದ್ರ ಸರ್ಕಾರ ಮತ್ತು ರೈಲ್ವೆ ಇಲಾಖೆ ವೇಗವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದ್ದರು. (ಸಾಂದರ್ಭಿಕ ಚಿತ್ರ)
6/ 8
2023ರ ಬಜೆಟ್ನಲ್ಲಿ ಇಡೀ ದೇಶದಲ್ಲಿ 300ರಿಂದ 400 ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳನ್ನು ಘೋಷಿಸುವ ಉದ್ದೇಶವನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ)
7/ 8
ರಾಜಧಾನಿ ಎಕ್ಸ್ಪ್ರೆಸ್ ಮತ್ತು ಶತಾಬ್ದಿ ಎಕ್ಸ್ಪ್ರೆಸ್ ಸೇರಿದಂತೆ ಅಸ್ತಿತ್ವದಲ್ಲಿರುವ ಎಲ್ಲಾ ಹೈಸ್ಪೀಡ್ ರೈಲುಗಳನ್ನು ಕ್ರಮೇಣ ವಂದೇ ಭಾರತ್ ಆಗಿ ಬದಲಾಯಿಸುವ ಸೂಚನೆಯನ್ನು ಕೇಂದ್ರ ಸರ್ಕಾರ ನೀಡಿದೆ. (ಸಾಂದರ್ಭಿಕ ಚಿತ್ರ)
8/ 8
ಇದಕ್ಕಾಗಿ ಮುಂಬರುವ ಬಜೆಟ್ನಲ್ಲಿ ರಾಷ್ಟ್ರೀಯ ಸಾರಿಗೆಗೆ ನೀಡಲಾಗಿದ್ದ 1.37 ಟ್ರಿಲಿಯನ್ ಬಜೆಟ್ ಗಾತ್ರವನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ)