ಬೆಂಗಳೂರಿನ ನಾಗರಿಕರೇ, ನಗರದಲ್ಲಿ ವಾಹನ ಪಾರ್ಕ್ ಮಾಡುವ ಕುರಿತು ಮಹತ್ವದ ಸೂಚನೆಯೊಂದನ್ನು ಬೆಂಗಳೂರು ಸಂಚಾರಿ ಪೊಲೀಸರು ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)
2/ 7
ಇನ್ಮೇಲೆ ಬೆಂಗಳೂರಿನಲ್ಲಿ ಎಲ್ಲೆಂದ್ರಲ್ಲಿ ವಾಹನ ಪಾರ್ಕ್ ಮಾಡುವಂತಿಲ್ಲ. ವಾಹನಗಳನ್ನು ಪಾರ್ಕ್ ಮಾಡುವಾಗ ಸದ್ಯ ಸೂಚಿಸಲಾದ ನಿಯಮವನ್ನು ಅನುಸರಿಬೇಕು ಎಂದು ಸಂಚಾರ ವಿಭಾಗದ ವಿಶೇಷ ಪೊಲೀಸ್ ಆಯುಕ್ತ ಡಾ.ಎಂ.ಎ.ಸಲೀಂ ಸುತ್ತೋಲೆ ಹೊರಡಿಸಿದ್ದಾರೆ. (ಸಾಂದರ್ಭಿಕ ಚಿತ್ರ)
3/ 7
ಬೆಂಗಳೂರಿನಲ್ಲಿ ಮುಂದಿನ ದಿನಗಳಲ್ಲಿ ಪಾದಚಾರಿ ಮಾರ್ಗದಲ್ಲಿ ವಾಹನ ಚಾಲಿಸಿದರೆ ಅಥವಾ ವಾಹನವನ್ನು ನಿಲ್ಲಿಸಿದರೆ ಕಠಿಣ ಕ್ರಮವನ್ನು ಎದುರಿಸಬೇಕಾಗುತ್ತದೆ. (ಸಾಂದರ್ಭಿಕ ಚಿತ್ರ)
4/ 7
ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗದಲ್ಲಿ ಇನ್ನಷ್ಟು ಸುಲಭವಾಗಿ ಸಂಚರಿಸಲು ಪಾದಚಾರಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ಬದಲಾವಣೆ ತರಲು ಟ್ರಾಫಿಕ್ ಇಲಾಖೆ ಮುಂದಾಗಿದೆ. (ಸಾಂದರ್ಭಿಕ ಚಿತ್ರ)
5/ 7
ಬೆಂಗಳೂರಿನಲ್ಲಿ ಫುಟ್ಪಾತ್ ಅತಿಕ್ರಮಣ, ವಾಹನ ಪಾರ್ಕಿಂಗ್ ಮಾಡಿದರೆ ಗಂಭೀರವಾಗಿ ಪರಿಗಣಿಸುವುದಾಗಿ ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)
6/ 7
ಫುಟ್ಪಾತ್ನಲ್ಲಿ ವಾಹನ ನಿಲ್ಲಿಸುವವರ ವಿರುದ್ಧ ಭಾರತೀಯ ದಂಡಸಂಹಿತೆಯ 283ನೇ ಸೆಕ್ಷನ್ ಅಡಿ ದೂರು ದಾಖಲಿಸುವುದಾಗಿ ವಿಶೇಷ ಆಯುಕ್ತ ಡಾ.ಎಂ.ಎ ಸಲೀಂ ಮಾಹಿತಿ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)
7/ 7
ಆದ್ದರಿಂದ ಇನ್ಮೇಲೆ ಬೆಂಗಳೂರಿನಲ್ಲಿ ವಾಹನ ಪಾರ್ಕಿಂಗ್ ಮಾಡುವ ಮುನ್ನ ಎಚ್ಚರಿಕೆ ವಹಿಸುವಂತೆ ನಾಗರಿಕರಿಗೆ ಟ್ರಾಫಿಕ್ ಇಲಾಖೆ ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)