ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಾವು ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ. ಇಡೀ ದೇಶದಲ್ಲಿ ಕರ್ನಾಟಕ ರಾಜ್ಯಕ್ಕೆ ಇದೊಂದು ಕಪ್ಪು ಚುಕ್ಕೆ. ಗುತ್ತಿಗೆದಾರರು ಸಚಿವರ ಮೇಲೆ ಧ್ವನಿಯನ್ನು ಎತ್ತಿದ್ದರು. ಸಂತೋಷ್ ಪಾಟೀಲ್ ಪ್ರಧಾನಿಗೆ, ಸಿಎಂಗೆ ಹಾಗೂ ಅವರ ಪಕ್ಷದ ಹಿರಿಯರಿಗೆ ಮನವಿ ಸಲ್ಲಿಸಿದ್ದರು ಎಂದು ತಿಳಿಸಿದರು.