Karnataka Rain Updates: ಚುನಾವಣೆಯ ದಿನ ಮಳೆಯಾಗುತ್ತಾ ಇಲ್ವಾ?

Karnataka Rains: ವಾಯುಭಾರ ಕುಸಿತ ಚಂಡಮಾರುತವಾಗಿ ಬದಲಾಗುವ ಪ್ರಬಲ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.

First published:

 • 17

  Karnataka Rain Updates: ಚುನಾವಣೆಯ ದಿನ ಮಳೆಯಾಗುತ್ತಾ ಇಲ್ವಾ?

  ದಿನೇ ದಿನೇ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಈ ವಾರವೂ ಭರ್ಜರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 27

  Karnataka Rain Updates: ಚುನಾವಣೆಯ ದಿನ ಮಳೆಯಾಗುತ್ತಾ ಇಲ್ವಾ?

  ಕರ್ನಾಟಕದಲ್ಲಿ ಮೇ 10 ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಆದರೆ ಮುಂದಿನ ಐದು ದಿನಗಳಲ್ಲಿ ಕರ್ನಾಟಕದ ರಾಜಧಾನಿ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ ಮತದಾನದ ಪ್ರಮಾಣದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 37

  Karnataka Rain Updates: ಚುನಾವಣೆಯ ದಿನ ಮಳೆಯಾಗುತ್ತಾ ಇಲ್ವಾ?

  ಚುನಾವಣೆಯ ದಿನದ ಮಳೆ

  ಭಾರತೀಯ ಮಾಪನಶಾಸ್ತ್ರ ಇಲಾಖೆಯು ಭಾನುವಾರ ಬಿಡುಗಡೆ ಮಾಡಿರುವ ಇತ್ತೀಚಿನ ಹವಾಮಾನ ಸಲಹೆಯ ಪ್ರಕಾರ ಬೆಂಗಳೂರು ನಗರದಲ್ಲಿ ಮೇ 11 ರವರೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 47

  Karnataka Rain Updates: ಚುನಾವಣೆಯ ದಿನ ಮಳೆಯಾಗುತ್ತಾ ಇಲ್ವಾ?

  ಬೆಂಗಳೂರಿನ ಐಎಂಡಿ ಹಿರಿಯ ವಿಜ್ಞಾನಿ ಎ ಪ್ರಸಾದ್ ಅವರು ನೀಡಿರುವ ಮುನ್ಸೂಚನೆಯ ಪ್ರಕಾರ, ಸೋಮವಾರ ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನವು 28 ಡಿಗ್ರಿ ಸೆಲ್ಸಿಯಸ್ ಆಗಿರಲಿದೆ. ಮಂಗಳವಾರ ಮತ್ತು ಬುಧವಾರ ಉಷ್ಣಾಂಶವು 31 ಡಿಗ್ರಿಗೆ ಏರಲಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 57

  Karnataka Rain Updates: ಚುನಾವಣೆಯ ದಿನ ಮಳೆಯಾಗುತ್ತಾ ಇಲ್ವಾ?

  ಮೇ ಎರಡನೇ ವಾರದಲ್ಲಿ ಬಂಗಾಳಕೊಲ್ಲಿಯಲ್ಲಿ 'ಮೋಚಾ' ಎಂಬ ಹೆಸರಿನ ಚಂಡಮಾರುತ ರಚನೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 67

  Karnataka Rain Updates: ಚುನಾವಣೆಯ ದಿನ ಮಳೆಯಾಗುತ್ತಾ ಇಲ್ವಾ?

  ವಾಯುಭಾರ ಕುಸಿತ ಚಂಡಮಾರುತವಾಗಿ ಬದಲಾಗುವ ಪ್ರಬಲ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಇದೇ ವೇಳೆ ಸೈಕ್ಲೋನ್ ಮೋಚಾ ಕರ್ನಾಟಕದ ರಾಜಧಾನಿ ಬೆಂಗಳೂರಿನ ಮೇಲೆ ಭಾರೀ ಪರಿಣಾಮ ಬೀರಲಿದೆ ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 77

  Karnataka Rain Updates: ಚುನಾವಣೆಯ ದಿನ ಮಳೆಯಾಗುತ್ತಾ ಇಲ್ವಾ?

  ಸೈಕ್ಲೋನ್ ಮೋಚಾ ಪರಿಣಾಮದಿಂದ ಬೆಂಗಳೂರಿನಲ್ಲಿ ಇನ್ನೂ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಹೀಗಾಗಿ ಸಾರ್ವಜನಿಕರು ಅಗತ್ಯ ಮುಂಜಾಗರೂಕತೆ ವಹಿಸಿಕೊಳ್ಳಬೇಕಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES