Bengaluru Rains: ಇಂದು ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ

Karnataka Rains: ಗಾಳಿಯೊಂದಿಗೆ ಮಳೆಯಾಗುವ ಹಿನ್ನೆಲೆಯಲ್ಲಿ ವಿದ್ಯುತ್​ ಪೂರೈಕೆಯಲ್ಲಿ ವ್ಯತ್ಯಾಸ, ಟ್ರಾಫಿಕ್ ಸಮಸ್ಯೆ, ಮರಗಳು ಉರುಳಿ ಬೀಳುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ.

First published:

  • 17

    Bengaluru Rains: ಇಂದು ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ

    ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಭಾರೀ ಮಳೆ ಸುರಿದಿದೆ. ಇದೇ ವೇಳೆ ಇಂದು ಸಹ ಮಳೆಯಾಗಲಿದೆಯಾ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Bengaluru Rains: ಇಂದು ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ

    ಬೆಂಗಳೂರಿನಲ್ಲಿ ಇಂದು ಬಹುತೇಕ ಇಡೀ ದಿನ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯ ಹೊತ್ತಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Bengaluru Rains: ಇಂದು ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ

    ಇತ್ತ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಹ ಇನ್ನೂ ಎರಡು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಿಕ್ಕಮಗಳೂರು, ಕೊಡಗು, ಮೈಸೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಮೇ 2ರವರೆಗೂ ಭಾರೀ ಮಳೆಯಾಗುವ ಸಂಭವ ಇದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Bengaluru Rains: ಇಂದು ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ

    ಅದೇ ರೀತಿ ಚಿತ್ರದುರ್ಗ, ಬಳ್ಳಾರಿ, ಚಾಮರಾಜನಗರ, ರಾಯಚೂರು, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಇನ್ನೆರಡು ದಿನಗಳ ಕಾಲ ಮಳೆಯಾಗಲಿದೆ. ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Bengaluru Rains: ಇಂದು ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ

    ಗಾಳಿಯೊಂದಿಗೆ ಮಳೆಯಾಗುವ ಹಿನ್ನೆಲೆಯಲ್ಲಿ ವಿದ್ಯುತ್​ ಪೂರೈಕೆಯಲ್ಲಿ ವ್ಯತ್ಯಾಸ, ಟ್ರಾಫಿಕ್ ಸಮಸ್ಯೆ, ಮರಗಳು ಉರುಳಿ ಬೀಳುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Bengaluru Rains: ಇಂದು ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ

    ಅಲ್ಲದೆ, ಜನರಿಗೆ ಮನೆಯಲ್ಲೇ ಉಳಿದುಕೊಳ್ಳಲು ಸಲಹೆ ನೀಡಲಾಗಿದ್ದು, ಮನೆಯ ಬಾಗಿಲು, ಕಿಟಕಿ ಮುಚ್ಚಿಡುವಂತೆ ತಿಳಿಸಿದೆ. ಹೊರ ಪ್ರದೇಶದಲ್ಲಿರುವ ಸಂದರ್ಭದಲ್ಲಿ ಮಳೆಯಿಂದ ರಕ್ಷಣೆ ಪಡೆಯಲು ಯಾವುದೇ ಕಾರಣಕ್ಕೂ ಮರದ ಕೆಳಗೆ ನಿಂತುಕೊಳ್ಳದಂತೆ ಎಚ್ಚರಿಕೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Bengaluru Rains: ಇಂದು ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ

    ಮಳೆಯಾಗುವ ಸಂದರ್ಭದಲ್ಲಿ ಗೋಡೆಗಳಿಗೆ ಒರಗಿಕೊಂಡು ನಿಲ್ಲುವುದು, ವಿದ್ಯುತ್ ಕಂಬಗಳನ್ನು ಮುಟ್ಟುವುದು ಮಾಡಬಾರದು ಎಂದು ತಜ್ಞರು ಸಲಹೆ ನೀಡಿದ್ದಾರೆ. ವಾಹನ ಚಲಾಯಿಸುವ ಸಂದರ್ಭದಲ್ಲಿ ಜಾಗೃತಿ ವಹಿಸುವಂತೆ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES