Audi Electric Cycle: ಎಲ್ಲಿ ನೋಡಿದ್ರೂ ಎಲೆಕ್ಟ್ರಿಕ್ ವಾಹನಗಳದ್ದೇ ಅಬ್ಬರ. ಇತ್ತೀಚಿನ ದಿನಗಳಲ್ಲಿ ಜನರು ಎಲೆಕ್ಟ್ರಿಕ್ ಸ್ಕೂಟರ್, ಎಲೆಕ್ಟ್ರಿಕ್ ಬೈಕ್, ಎಲೆಕ್ಟ್ರಿಕ್ ಬೈಸಿಕಲ್ ಖರೀದಿಸುತ್ತಿದ್ದಾರೆ. ಅದಕ್ಕಾಗಿಯೇ ಹೊಸ ಕಂಪನಿಗಳು ಎಲೆಕ್ಟ್ರಿಕ್ ವಾಹನ ವಿಭಾಗಕ್ಕೆ ಪ್ರವೇಶಿಸುತ್ತಿವೆ. ದೊಡ್ಡ ಕಂಪನಿಗಳು ಕೂಡ ಎಲೆಕ್ಟ್ರಿಕ್ ವಾಹನಗಳತ್ತ ನೋಡುತ್ತಿವೆ. ಇತ್ತೀಚೆಗಷ್ಟೇ ಪ್ರಸಿದ್ಧ ಕಾರು ತಯಾರಿಕಾ ಕಂಪನಿ ಆಡಿ ಕೂಡ ಈ ಪಟ್ಟಿಗೆ ಸೇರಿಕೊಂಡಿದೆ. ಆಡಿ ಕಂಪನಿಯು ಎಲೆಕ್ಟ್ರಿಕ್ ಬೈಸಿಕಲ್ ಅನ್ನು ಸಹ ಪರಿಚಯಿಸಿದೆ.