2006ರಲ್ಲಿ ನಿರ್ಮಲಾ ಸೀತಾರಾಮನ್ ಬಿಜೆಪಿ ಸೇರಿದರು. 2010 ರಲ್ಲಿ ಬಿಜೆಪಿಯ ರಾಷ್ಟ್ರೀಯ ವಕ್ತಾರರಾದರು. 2014ರಲ್ಲಿ, ಬಿಜೆಪಿ ಚುನಾವಣೆಯಲ್ಲಿ ಗೆದ್ದ ನಂತರ ನಿರ್ಮಲಾ ಸೀತಾರಾಮನ್ ಅವರು ನರೇಂದ್ರ ಮೋದಿ ಅವರ ಸಂಪುಟದಲ್ಲಿ ಕಿರಿಯ ಸಚಿವರಾಗಿದ್ದರು. ಜೊತೆಗೆ ರಕ್ಷಣಾ ಸಚಿವರಾದ ದೇಶದ 2ನೇ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇಂದಿರಾ ಗಾಂಧಿ ಈ ಮೊದಲು ರಕ್ಷಣಾ ಸಚಿವರಾಗಿ ಸೇವೆ ಸಲ್ಲಿಸಿದ್ದ ಮೊದಲ ಮಹಿಳೆಯಾಗಿದ್ದಾರೆ.