ದೇಶಕ್ಕೆ ಅನ್ನ ಕೊಡುವ ರೈತನ ಆದಾಯ ಹೆಚ್ಚಿಸಲು ಕೇಂದ್ರ ಸರ್ಕಾರ ಹೊಸ ಹೊಸ ಯೋಜನೆಗಳನ್ನು ರೂಪಿಸುತ್ತಿದೆ. 2019ರಲ್ಲಿ ಪಿಎಂ ಕಿಸಾನ್ ಯೋಜನೆಯನ್ನು ಜಾರಿಗೆ ತಂದು ರೈತಾಪಿ ವರ್ಗಕ್ಕೆ ಅನುಕೂಲ ಮಾಡಿಕೊಟ್ಟಿದೆ. ಈ ಸ್ಕೀಂನ ಅಡಿಯಲ್ಲಿ ರೈತರು ವರ್ಷಕ್ಕೆ 6 ಸಾವಿರ ಹಣವನ್ನು ಪಡೆಯುತ್ತಿದ್ದಾರೆ. ಇದಲ್ಲದೇ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಬೆಳೆ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಜೊತೆಗೆ ರಸಗೊಬ್ಬರಗಳ ಮೇಲೆ ಸಹಾಯಧನವನ್ನು ನೀಡಲು ಪ್ರಾರಂಭಿಸಿದೆ.
ಪ್ರಾಯೋಜಕ ಬ್ಯಾಂಕ್ಗಳು ಡಿಜಿಟಲೀಕರಣ ಮತ್ತು ತಂತ್ರಜ್ಞಾನ ಸುಧಾರಣೆಗೆ ನೆರವಾಗಬೇಕು ಎಂದು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳ ಕುರಿತು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು. ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು ಕೃಷಿ ಸಾಲದಲ್ಲಿ ಪ್ರಮುಖ ಪಾತ್ರವನ್ನು ವಹಿಸಿವೆ. ಇದರ ಪ್ರಾಯೋಜಕ ಬ್ಯಾಂಕ್ಗಳು ಸಾರ್ವಜನಿಕ ವಲಯದ ಬ್ಯಾಂಕುಗಳು (PSB ಗಳು) ಮತ್ತು ರಾಜ್ಯ ಸರ್ಕಾರಗಳು ಆಗಿವೆ.