PM Fasal Bima Yojana: ರೈತರಿಗೆ ಗುಡ್ ನ್ಯೂಸ್, PMFBY ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲು ಕೇಂದ್ರದ ಸಿದ್ಧತೆ
PM Fasal Bhima Yojana: ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯು ರೈತರು ಸಂಕಷ್ಟದಲ್ಲಿದ್ದಾಗ ಆರ್ಥಿಕ ನೆರವು ನೀಡುವ ಯೋಜನೆ ಆಗಿದೆ. ಈ ವಿಮೆ ರೈತನಿಗೆ ರಕ್ಷಣಾ ಕವಚ ಎಂದು ಹೇಳಬಹುದು. ಹಿಡುವಳಿದಾರರು ಸೇರಿದಂತೆ ಎಲ್ಲಾ ರೈತರು ಈ ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ.
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ (PMFBY) ಹಲವು ಬದಲಾವಣೆಗಳನ್ನು ತರಲು ಕೇಂದ್ರ ಸರ್ಕಾರ ಯೋಚಿಸುತ್ತಿದೆ ಎಂಬ ಮಾಹಿತಿಯನ್ನು ಕೃಷಿ ಇಲಾಖೆ ಕಾರ್ಯದರ್ಶಿ ಮನೋಜ್ ಅಹುಜಾ ಬಹಿರಂಗಪಡಿಸಿದ್ದಾರೆ. (ಸಾಂದರ್ಭಿಕ ಚಿತ್ರ)
2/ 8
ಇತ್ತೀಚಿನ ಹವಾಮಾನ ವೈಪರೀತ್ಯ ಮತ್ತು ತಂತ್ರಜ್ಞಾನದ ತ್ವರಿತ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ರೈತರ ಅನುಕೂಲಕ್ಕಾಗಿ ಕೆಲ ಬದಲಾವಣೆ ತರಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ಅಹುಜಾ ಹೇಳಿದ್ದಾರೆ.
3/ 8
2022 ಮಹಾರಾಷ್ಟ್ರ, ಹರಿಯಾಣ ಮತ್ತು ಪಂಜಾಬ್ನಲ್ಲಿ ಭಾರೀ ಮಳೆಯಿಂದಾಗಿ ರೈತರು ಸಂಕಷ್ಟದಲ್ಲಿ ಸಿಲುಕಿದ್ದರು. ಆದ್ರೆ ಮಧ್ಯಪ್ರದೇಶ, ಉತ್ತರ ಪ್ರದೇಶ, ಬಿಹಾರ ಮತ್ತು ಜಾರ್ಖಂಡ್ನಲ್ಲಿ ಮಳೆ ಕೊರತೆಯಿಂದಾಗಿ ರೈತರು ಸಂಕಷ್ಟದಲ್ಲಿ ಸಿಲುಕಿದ್ದರು. (ಸಾಂದರ್ಭಿಕ ಚಿತ್ರ)
4/ 8
ಮಳೆಯ ಅನಿಶ್ಚಿತತೆಯಿಂದ ರೈತರ ಬೆಳೆ ಹಾನಿಗೊಳಗಾಗುತ್ತಿದೆ. ಅತಿ ಮಳೆಯಿಂದಾಗಿ ಒಂದೆಡೆ ಬೆಳೆ ಜಮೀನಿನಲ್ಲಿ ಕೊಳೆಯುತ್ತಿದ್ರೆ, ಮತ್ತೊಂದು ಭಾಗದಲ್ಲಿ ಮಳೆ ಇಲ್ಲದೇ ಬೆಳೆ ಒಣಗುತ್ತಿದೆ. (ಸಾಂದರ್ಭಿಕ ಚಿತ್ರ)
5/ 8
ಈ ಹವಾಮಾನ ವೈಪರೀತ್ಯ ಬೆಳೆಯ ಇಳುವರಿ ಮೇಲೆ ನೇರ ಪರಿಣಾಮ ಬೀರುತ್ತಿದೆ. ಇದರಿಂದ ದುರ್ಬಲ ವರ್ಗದ ರೈತ ಸಮುದಾಯ ಆರ್ಥಿಕ ಸಂಕಷ್ಟದಲ್ಲಿ ಸಿಲುಕುತ್ತಿದೆ. ಪ್ರಾಕೃತಿಕ ವಿಕೋಪದಿಂದ ರೈತರನ್ನು ರಕ್ಷಿಸಬೇಕಿದೆ. ಮುಂದಿನ ದಿನಗಳಲ್ಲಿ ಬೆಳೆ ವಿಮೆಗೆ ಅರ್ಜಿ ಸಲ್ಲಿಸುವವರ ಸಂಖ್ಯೆ ಹೆಚ್ಚಾಗಬಹುದು ಎಂದು ಅಹುಜಾ ಅಭಿಪ್ರಾಯಪಟ್ಟಿದ್ದಾರೆ. (ಸಾಂದರ್ಭಿಕ ಚಿತ್ರ)
6/ 8
ರೈತರಿಗೆ ವಿಮಾ ರಕ್ಷಣೆಯನ್ನು ಒದಗಿಸಲು ಇತರ ರೀತಿಯ ಗ್ರಾಮೀಣ ಮತ್ತು ಕೃಷಿ ವಿಮಾ ಉತ್ಪನ್ನಗಳ ಮೇಲೆ ಹೆಚ್ಚು ಗಮನಹರಿಸುವ ಅಗತ್ಯವಿದೆ ಎಂದು ಅಹುಜಾ ಹೇಳುತ್ತಾರೆ. (ಸಾಂದರ್ಭಿಕ ಚಿತ್ರ)
7/ 8
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಲ್ಲಿ ತ್ವರಿತವಾಗಿ ವಿಮೆ ಒದಗಿಸಲು ರೈತ ಸ್ನೇಹಿ ಬದಲಾವಣೆಗಳನ್ನು ಮಾಡಲು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಸಿದ್ಧವಾಗಿದೆ ಎಂದು ಅಹುಜಾ ಹೇಳಿದರು. (ಸಾಂದರ್ಭಿಕ ಚಿತ್ರ)
8/ 8
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ನೈಸರ್ಗಿಕ ವಿಕೋಪಗಳು, ಕೀಟಗಳು ಮತ್ತು ರೋಗಗಳು ಅಥವಾ ಯಾವುದೇ ಬೆಳೆ ನಷ್ಟದ ಸಂದರ್ಭದಲ್ಲಿ ವಿಮಾ ರಕ್ಷಣೆಯನ್ನು ಒದಗಿಸಲಾಗುತ್ತದೆ. ಈ ಮೂಲಕ ರೈತರನ್ನು ಆರ್ಥಿಕ ಸಂಕಷ್ಟದಿಂದ ರಕ್ಷಣೆ ಮಾಡಲಾಗುತ್ತದೆ. (ಸಾಂದರ್ಭಿಕ ಚಿತ್ರ)