ವಾಹನ ಬಳಕೆದಾರರ ಯೋಗ ಕ್ಷೇಮವನ್ನು ಗಮನದಲ್ಲಿಟ್ಟುಕೊಂಡು ಸಚಿವಾಲಯವು ಈ ಸೂಚನೆಗಳನ್ನು ನೀಡಿದೆ. ಅಕ್ಕಪಕ್ಕದ ಕೆಲವು ದೇಶಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ವಿಪರೀತವಾಗಿದೆ. ಅದರಲ್ಲೂ ಪಾಕಿಸ್ತಾನದ ಆರ್ಥಿಕ ಬಿಕ್ಕಟ್ಟಿನಿಂದಾಗಿ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹಿಂದೆಂದೂ ಕಂಡರಿಯದ ಮಟ್ಟಕ್ಕೆ ಏರಿಕೆಯಾಗಿದೆ.