Gold Price Today: ಚಿನ್ನದ ಬೆಲೆಯಲ್ಲಿ 50 ರೂ. ಹೆಚ್ಚಳ: ನಿನ್ನೆ ಎಷ್ಟಿತ್ತು? ಇಂದು ಎಷ್ಟಿದೆ? ಇಲ್ಲಿದೆ ಮಾಹಿತಿ
Gold Rate on Jan 22, 2022: ದೇಶದಲ್ಲಿಂದು ಚಿನ್ನದ ಬೆಲೆ (Gold Price)ಯಲ್ಲಿ ಕೊಂಚ ಏರಿಕೆಯಾಗಿದೆ.. ಬೆಂಗಳೂರಿನಲ್ಲಿ (Bengaluru) ಸಹ ಇಂದು ಬಂಗಾರದ ಬೆಲೆ ಏರಿಕೆಯಾಗಿದೆ ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,590 ರೂ. ಇತ್ತು. ಇಂದು 50 ರೂ. ಹೆಚ್ಚಾಗಿ 47,640 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 49,590 ರೂ. ಇತ್ತು. ಇಂದು 50 ರೂ. ಹೆಚ್ಚಾಗಿ 49,640 ರೂ. ಆಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) 45.500 ರೂ. ಇತ್ತು. ಇಂದು 100 ರೂ. ಹೆಚ್ಚಾಗಿ 45,650 ರೂ. ಆಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನ ನಿನ್ನೆ 49,700 ರೂ. ಇತ್ತು. ಇಂದು 100 ರೂ. ಹೆಚ್ಚಾಗಿ 49,800 ರೂ. ಆಗಿದೆ.
2/ 5
ಈ ಮಧ್ಯೆ, ದೇಶದ ಮೆಟ್ರೋ ನಗರಗಳಾದ ಚೆನ್ನೈನಲ್ಲಿ 50,120 ರೂ. ಇದ್ದರೆ, ಮುಂಬೈನಲ್ಲಿ 49,640 ರೂ., ದೆಹಲಿಯಲ್ಲಿ 52,100 ರೂ. ಹಾಗೂ ಕೋಲ್ಕತ್ತದಲ್ಲಿ 50,500 ರೂ. ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಶಿಕ್ನಲ್ಲೂ 24 ಕ್ಯಾರೆಟ್ ಚಿನ್ನದ ಬೆಲೆ 49 ಸಾವಿರದಿಂದ 50 ಸಾವಿರದ ಆಸುಪಾಸಿನಲ್ಲೇ ಇದೆ.
3/ 5
ಬಂಗಾರದ ಬೆಲೆ ದೇಶದಲ್ಲಿ ಏರಿಕೆಯಾಗಿದ್ದರೆ, ಬೆಳ್ಳಿ ದರ (Silver Rate) ಸಹ ಹೆಚ್ಚಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 64,600 ರೂ. ಇತ್ತು. ಇಂದು 800 ರೂ. ಏರಿಕೆಯಾಗಿ 65,400 ರೂ. ಆಗಿದೆ. ಬೆಂಗಳೂರು, ಮೈಸೂರಿನಲ್ಲಿ ಇಂದು 1 ಕೆಜಿ ಬೆಳ್ಳಿಯ ಬೆಲೆ 69,300 ರೂ. ಇದೆ.
4/ 5
ಉಳಿದಂತೆ ಚೆನ್ನೈ, ಹೈದರಾಬಾದ್, ಕೇರಳ, ಕೊಯಮತ್ತೂರು, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 68 ರಿಂದ 69 ಸಾವಿರ ರೂ. ಆಸುಪಾಸಿನಲ್ಲಿದೆ. ಇನ್ನು, ಮೆಟ್ರೋ ನಗರಗಳಾದ ಮುಂಬೈ, ದೆಹಲಿ ಹಾಗೂ ಕೋಲ್ಕತ್ತದಲ್ಲಿ 65,400 ರೂ. ದರ ಇದೆ.
5/ 5
ದೇಶದ ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಇದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನಾಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ.