Gold And Silver Price Today: ಶಾಪಿಂಗ್ ಮಾಡೋದಾದ್ರೆ ಚಿನ್ನವನ್ನೇ ಖರೀದಿಸಿ, ಇದುವೆ ಸೂಕ್ತ ಸಮಯ; ಬೆಳ್ಳಿ ದರದಲ್ಲಿ 4,200 ರೂ. ಏರಿಕೆ
Gold Rate on April 17, 2022: ನೀವು ಚಿನ್ನ ಖರೀದಿಗೆ ಹೋಗುತ್ತಿದ್ರೆ ಇವತ್ತಿನ ಬೆಲೆ ಎಷ್ಟಿದೆ ಎಂಬುದನ್ನು ತಿಳಿದುಕೊಳ್ಳಲೇಬೇಕು. ಇದರಿಂದ ಚಿನ್ನ (Gold) ಖರೀದಿ ಸುಲಭವಾಗಲಿದೆ. ಕಳೆದೊಂದು ವಾರದಿಂದ ಚಿನ್ನದ ಬೆಲೆ ಸಾಕಷ್ಟು ಏರಿಳಿತ ಕಾಣುತ್ತಿದೆ. ಇವತ್ತಿನ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.
ದೇಶದಲ್ಲಿಂದು ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 49,550 ರೂ.ಇದೆ. ಇನ್ನು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,060 ರೂ. ಇದೆ.
2/ 8
ಇನ್ನು ರಾಜಧಾನಿ ಬೆಂಗಳೂರಿನಲ್ಲಿಯೂ ಚಿನ್ನದ ಬೆಲೆಯಲ್ಲಿ ವ್ಯತ್ಯಾಸ ಕಂಡು ಬಂದಿಲ್ಲ. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 49,550 ರೂ. ಇದ್ರೆ, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,060 ರೂ.ನಷ್ಟಿದೆ. ಹಾಗೆಯೇ ಮೈಸೂರು, ಮಂಗಳೂರಿನಲ್ಲೂ ಇದೇ ಬೆಲೆ ಇದೆ
3/ 8
ಭಾರತದಲ್ಲಿ ಹೆಚ್ಚು ಜನಸಂಖ್ಯೆ ಇರುವ ಹಾಗೆ ಆಭರಣ ಪ್ರಿಯರ ಜನಸಂಖ್ಯೆಯೂ ಕಡಿಮೆ ಏನಿಲ್ಲ. ಈ ಹಿನ್ನೆಲೆ ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ.
4/ 8
ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 48 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.
5/ 8
ಚೆನ್ನೈನಲ್ಲಿ 50,140 ರೂ. ಇದ್ದರೆ, ಮುಂಬೈನಲ್ಲಿ 49,550 ರೂ., ದೆಹಲಿಯಲ್ಲಿ 49,550 ರೂ. ಹಾಗೂ ಕೋಲ್ಕತ್ತದಲ್ಲಿ 49,550 ರೂ. ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಶಿಕ್ನಲ್ಲೂ ಹೆಚ್ಚೂ ಕಡಿಮೆ 48 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ
6/ 8
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ.
7/ 8
ನಿಮಗೆ ಹಾಲ್ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.
8/ 8
ಬಂಗಾರದ ಬೆಲೆ ದೇಶದಲ್ಲಿ ಸ್ಥಿರವಾಗಿದ್ರೆ, ಬೆಳ್ಳಿ ದರ (Silver Rate) ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 70,000 ರೂ. ಇತ್ತು. ಇಂದು 4,200 ರೂ. ಏರಿಕೆಯಾಗಿ 74,200 ರೂ. ಆಗಿದೆ. ಆದರೆ, ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 74,000 ರೂ. ಆಸುಪಾಸಿನಲ್ಲಿದೆ