Gold Price Today: ಹೂಡಿಕೆದಾರರಿಗೆ ಇದುವೇ ಒಳ್ಳೆಯ ಸಮಯ: ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರ
Gold Rate on Feb 1, 2022: ದೇಶದಲ್ಲಿಂದು 22 ಕ್ಯಾರೆಟ್ ಚಿನ್ನದ ಬೆಲೆ (Gold Price)ಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದರೆ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಸಹ 22 ಕ್ಯಾರೆಟ್ ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದ್ದರೆ, 24 ಕ್ಯಾರೆಟ್ ಚಿನ್ನದ ಬೆಲೆ ಇಳಿಕೆಯಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) 48,990 ರೂ. ಇತ್ತು. ಇಂದು 10 ರೂ. ಕಡಿಮೆಯಾಗಿ 48,980 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ ನಿನ್ನೆ 44,900 ರೂ. ಇತ್ತು. ಇಂದು ಸಹ ಅಷ್ಟೇ ಬೆಲೆ ಇದೆ. ಇನ್ನು, ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ಮಂಗಳೂರಿನಲ್ಲೂ ಇದೇ ಬೆಲೆ ಇದೆ.
2/ 8
ಭಾರತದಲ್ಲಿ ಆಭರಣ ಪ್ರಿಯರ ಜನಸಂಖ್ಯೆ ಕಡಿಮೆ ಏನಿಲ್ಲ. ಚಿನ್ನ, ಬೆಳ್ಳಿ ಆಭರಣ ಧರಿಸಲು, ಮಕ್ಕಳ ಮದುವೆಗೆ ಎಂದು ಆಭರಣ ಮಾಡಿಸುವವರು, ಚಿಕ್ಕ ಮಕ್ಕಳಿಗೂ ಆಭರಣ ಮಾಡಿಸುವವರು - ಹೀಗೆ ಯಾವುದಾದರೂ ಕಾರಣಕ್ಕೆ ಒಡವೆ ಮಾಡಿಸಿಕೊಳ್ಳುತ್ತಿರುತ್ತಾರೆ.
3/ 8
ಆಪತ್ಕಾಲದಲ್ಲಿ ಚಿನ್ನ ಅಡ ಇಡಲು ಅಥವಾ ಮಾರಾಟ ಮಾಡಲು ಬೇಕಾಗುತ್ತದೆಂದು ಅದರ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಸಹ ಇನ್ನೂ ಕಡಿಮೆಯಾಗಿಲ್ಲ.
4/ 8
ದೇಶದ ಇತರೆ ನಗರಗಳಾದ ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 49 ಸಾವಿರದ ಆಸುಪಾಸಿನಲ್ಲೇ ಇದೆ.
5/ 8
ಈ ಮಧ್ಯೆ, ದೇಶದ ಮೆಟ್ರೋ ನಗರಗಳಾದ ಚೆನ್ನೈನಲ್ಲಿ 49,380 ರೂ. ಇದ್ದರೆ, ಮುಂಬೈನಲ್ಲಿ 48,980 ರೂ., ದೆಹಲಿಯಲ್ಲಿ 48,980 ರೂ. ಹಾಗೂ ಕೋಲ್ಕತ್ತದಲ್ಲಿ 49,090 ರೂ. ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಶಿಕ್ನಲ್ಲೂ 24 ಕ್ಯಾರೆಟ್ ಚಿನ್ನದ ಬೆಲೆ 49 ಸಾವಿರದ ಆಸುಪಾಸಿನಲ್ಲೇ ಇದೆ.
6/ 8
ಆಭರಣ ಬಂಗಾರದ ಬೆಲೆ ದೇಶದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದರೆ, ಬೆಳ್ಳಿ ದರ (Silver Rate) ಇಳಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 61,300 ರೂ. ಇತ್ತು. ಇಂದು 400 ರೂ. ಕಡಿಮೆಯಾಗಿ 60,900 ರೂ. ಆಗಿದೆ.
7/ 8
ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ ಇಂದು 1 ಕೆಜಿ ಬೆಳ್ಳಿಯ ಬೆಲೆ 65,600 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೇರಳ, ಕೊಯಮತ್ತೂರು, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 65,600 ರೂ. ಆಗಿದೆ.
8/ 8
ಇನ್ನು, ಮೆಟ್ರೋಪಾಲಿಟನ್ ನಗರಗಳಾದ ಮುಂಬೈ ಹಾಗೂ ಕೋಲ್ಕತ್ತದಲ್ಲಿ 60,900 ರೂ. ದರ ಇದ್ದರೆ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 65,600 ರೂ. ಆಗಿದೆ.