ನಿತ್ಯ ದೇಶದ ಮಹಾನಗರಗಳಲ್ಲಿ ಅಲ್ಪ ವ್ಯತ್ಯಾಸಗಳಿರುವುದನ್ನು ಸಾಮಾನ್ಯವಾಗಿ ಗಮನಿಸಬಹುದು. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 49,550 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 50,230, ರೂ. 49,500, ರೂ. 49,500 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 49,650 ರೂ. ಆಗಿದೆ.
ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರಗಳ ಕುರಿತು ನೋಡುವುದಾದರೆ ಒಂದು ಗ್ರಾಂ (1GM) 22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,950 ಆಗಿದ್ದು, 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,400 ಆಗಿದೆ. ಅದೇ ರೀತಿ ಎಂಟು ಗ್ರಾಂ (8GM) 22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 39,600 ಆಗಿದ್ದು, 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 43,200 ಆಗಿದೆ.,
ಬೆಂಗಳೂರು ನಗರ ನೋಡುವುದಾದರೆ ಬೆಳ್ಳಿ ಬೆಲೆಯಲ್ಲಿ ನಿನ್ನೆಗಿಂತ ಸ್ವಲ್ಪ ಏರಿಕೆಯಾಗಿದೆ. ನಗರದಲ್ಲಿ ಇಂದು ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ಬೆಲೆಗಳು ಕ್ರಮವಾಗಿ ರೂ. 713, ರೂ. 7,130 ಹಾಗೂ ರೂ. 71,300 ಗಳಾಗಿವೆ. ಮಿಕ್ಕಂತೆ ದೇಶದ ಇತರೆ ಮಹಾನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 71,300 ಆಗಿದ್ದರೆ, ದೆಹಲಿಯಲ್ಲಿ ರೂ. 66,200, ಮುಂಬೈನಲ್ಲಿ ರೂ. 66,200 ಹಾಗೂ ಕೊಲ್ಕತ್ತದಲ್ಲೂ ರೂ. 66,200 ಗಳಾಗಿದೆ.