ಆರ್ಥಿಕ ಸಂಕಷ್ಟದ ಕಾಲದಲ್ಲಿ ಕೈಯನ್ನು ಹಿಡಿಯುವ ನಂಬಿಕಸ್ಥ ಗೆಳೆಯ ಎಂದು ನಂಬಲಾಗಿರುವ ಚಿನ್ನವು ಈಗ ಹೂಡಿಕೆಯ ವಸ್ತುವಾಗಿಯೂ ಪ್ರಾಮುಖ್ಯತೆ ಪಡೆದಿದೆ. ಹಾಗಾಗಿ, ನಮ್ಮ ದೇಶದಲ್ಲಷ್ಟೇ ಅಲ್ಲ, ಜಗತ್ತಿನಾದ್ಯಂತ ಬಂಗಾರಕ್ಕೆ ಇರುವ ಬೇಡಿಕೆ ಅಷ್ಟಿಷ್ಟಲ್ಲ. ಭಾರತದ ಮಾರುಕಟ್ಟೆಗಳಲ್ಲಿ ಇಂದು ಚಿನ್ನ ಖರೀದಿ ಸಹಜ ಸಂಗತಿಯಾಗಿದ್ದು ದಿನದಲ್ಲೇ ಕೋಟ್ಯಂತರ ರೂಪಾಯಿಗಳಷ್ಟು ವ್ಯವಹಾರವನ್ನು ಈ ವ್ಯವಹಾರ ಹೊಂದಿದೆ.