ಬೆಂಗಳೂರು ಸೇರಿದಂತೆ ದೇಶದ ಮಹಾನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟೆಷ್ಟಿದೆ ಎಂದು ನೋಡುವುದಾದರೆ, ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 49,650 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 50,730, ರೂ. 49,600, ರೂ. 49,600 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 49,750 ರೂ. ಆಗಿದೆ.
ಇನ್ನು ಬೆಳ್ಳಿಯ ವಿಷಯಕ್ಕೆ ಬಂದರೆ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಸ್ವಲ್ಪ ಏರಿಕೆ ಆಗಿರುವುದನ್ನು ಗಮನಿಸಬಹುದು. ಸಾಮಾನ್ಯವಾಗಿ ಚಿನ್ನದಂತೆಯೇ ಬೆಳ್ಳಿ ಬೆಲೆಯಲ್ಲೂ ದರದ ವ್ಯತ್ಯಾಸ ಸಾಮಾನ್ಯ. ಇಂದು ಭಾರತದ ಮಾರುಕಟ್ಟೆಯಲ್ಲಿ ಒಂದು ಕೆಜಿ ಬೆಳ್ಳಿಯ ದರ ರೂ. 69,500 ಗಳಷ್ಟಿದೆ. ಕಳೆದ ಎರಡು ವಾರಗಳನ್ನು ಗಮನಿಸಿದರೆ ಸದ್ಯ ಬೆಳ್ಳಿ ಬೆಲೆಯಲ್ಲಿ ಸಾಕಷ್ಟು ಏರಿಕೆಯೇ ಆಗಿದೆ ಎನ್ನಬಹುದಾಗಿದೆ.
ಇನ್ನು, ಬೆಂಗಳೂರು ನಗರ ನೋಡುವುದಾದರೆ ಬೆಳ್ಳಿ ಬೆಲೆಯಲ್ಲಿ ನಿನ್ನೆಗಿಂತ ಅಲ್ಪ ಏರಿಕೆಯಾಗಿರುವುದನ್ನು ನೋಡಬಹುದು. ನಗರದಲ್ಲಿ ಇಂದು ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ಬೆಲೆಗಳು ಕ್ರಮವಾಗಿ ರೂ. 731, ರೂ. 7,310 ಹಾಗೂ ರೂ. 73,100 ಗಳಾಗಿವೆ. ಮಿಕ್ಕಂತೆ ದೇಶದ ಇತರೆ ಮಹಾನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 73,100 ಆಗಿದ್ದರೆ, ದೆಹಲಿಯಲ್ಲಿ ರೂ. 69,500, ಮುಂಬೈನಲ್ಲಿ ರೂ. 69,500 ಹಾಗೂ ಕೊಲ್ಕತ್ತದಲ್ಲೂ ರೂ. 69,500 ಗಳಾಗಿದೆ.