ಬೆಂಗಳೂರು ಸೇರಿದಂತೆ ದೇಶದ ಮಹಾನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟೆಷ್ಟಿದೆ ಎಂದು ನೋಡುವುದಾದರೆ, ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 50,300 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 51,240, ರೂ. 50,250, ರೂ. 50,250 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 50,400 ರೂ. ಆಗಿದೆ.
ಇನ್ನು, ಬೆಂಗಳೂರು ನಗರ ನೋಡುವುದಾದರೆ ಬೆಳ್ಳಿ ಬೆಲೆಯಲ್ಲಿ ಗಮನಾರ್ಹಏರಿಕೆಯಾಗಿದೆ. ನಗರದಲ್ಲಿ ಇಂದು ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ಬೆಲೆಗಳು ಕ್ರಮವಾಗಿ ರೂ. 747, ರೂ. 7,470 ಹಾಗೂ ರೂ. 74,700 ಗಳಾಗಿವೆ. ಮಿಕ್ಕಂತೆ ದೇಶದ ಇತರೆ ಮಹಾನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 74,700 ಆಗಿದ್ದರೆ, ದೆಹಲಿಯಲ್ಲಿ ರೂ. 70,100, ಮುಂಬೈನಲ್ಲಿ ರೂ. 70,100 ಹಾಗೂ ಕೊಲ್ಕತ್ತದಲ್ಲೂ ರೂ. 70,100 ಗಳಾಗಿದೆ.