ಇಂದು ಚಿನ್ನ ಕೇವಲ ಮೈಮೇಲೆ ತೊಡಬಹುದಾದ ಆಕರ್ಷಕ ಆಭರಣವಾಗಿಯಷ್ಟೇ ಉಳಿದಿಲ್ಲ, ಹಣಕಾಸಿನ ವಿಚಾರದಲ್ಲಿ ಕಷ್ಟಗಳು ಬಂದಾಗ ನೆರವು ನೀಡುವ ವಸ್ತುವೂ ಆಗಿದೆ. ಅಲ್ಲದೆ, ದೇಶದ ಆರ್ಥಿಕ ಸದೃಢತೆಯೂ ಅದು ತಾನು ಹೊಂದಿರುವ ಚಿನ್ನದ ಪ್ರಮಾಣದ ಮೇಲೆ ಅವಲಂಬಿತವಾಗಿದೆ ಹಾಗೂ ಚಿನ್ನ ಜಗತ್ತಿನಾದ್ಯಂತ ಎಲ್ಲ ದೇಶಗಳಲ್ಲೂ ಮಾನ್ಯತೆ ಪಡೇದಿದ್ದು ಸ್ವೀಕರಿಸಲ್ಪಡುತ್ತದೆ. ಈ ಎಲ್ಲ ಅಂಶಗಳಿಂದಾಗಿ ಚಿನ್ನಕ್ಕೆ ದೊಡ್ಡದಾದ ಅಂತಾರಾಷ್ಟ್ರೀಯ ಮಾರುಕಟ್ಟೆಯೇ ಇದೆ.
ಬೆಂಗಳೂರು ನಗರ ನೋಡುವುದಾದರೆ ಇಂದು ನಗರದಲ್ಲಿ ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ಬೆಲೆಗಳು ಕ್ರಮವಾಗಿ ರೂ. 760, ರೂ. 7,600 ಹಾಗೂ ರೂ. 76,000 ಗಳಾಗಿವೆ. ಮಿಕ್ಕಂತೆ ದೇಶದ ಇತರೆ ಮಹಾನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 76,000 ಆಗಿದ್ದರೆ, ದೆಹಲಿಯಲ್ಲಿ ರೂ. 73,300, ಮುಂಬೈನಲ್ಲಿ ರೂ. 73,300 ಹಾಗೂ ಕೊಲ್ಕತ್ತದಲ್ಲೂ ರೂ. 73,300 ಗಳಾಗಿದೆ.