ಚಿನ್ನ ಸದಾ ಬೇಡಿಕೆಯಲ್ಲಿರುವ ಲೋಹ. ಮಾರುಕಟ್ಟೆಯಲ್ಲಿ ಹೂಡಿಕೆದಾರರಿಂದ ಹಿಡಿದು ಸಾಮಾನ್ಯ ಜನರವರೆಗೆ ಚಿನ್ನವನ್ನು ಕೊಂಡುಕೊಳ್ಳುವವರು ಪ್ರತಿನಿತ್ಯ ಇರುತ್ತಾರೆ. ಪ್ರಾಚೀನ ಕಾಲದಿಂದಲೂ ಚಿನ್ನವನ್ನು ಕಷ್ಟ ಕಾಲದಲ್ಲಿ ಕೈಹಿಡಿಯುವ ಆಪದ್ಬಾಂಧವ ಎಂದೇ ಪರಿಗಣಿಸಲಾಗುತ್ತದೆ. ಇದು ಸತ್ಯವೂ ಹೌದು. ಹಾಗಾಗಿ ಚಿನ್ನಕ್ಕೆ ಸದಾ ಬೇಡಿಕೆ ಇರುವುದನ್ನು ಗಮನಿಸಬಹುದು. (ಸಾಂದರ್ಭಿಕ ಚಿತ್ರ)
ಇಂದು ಭಾರತದ ಮಾರುಕಟ್ಟೆಯಲ್ಲಿ ಚಿನ್ನವು ನಿನ್ನೆಯ ಬೆಲೆಯನ್ನೇ ಕಾಪಾಡಿಕೊಂಡಿದೆ. ಪ್ರತಿ ಗ್ರಾಂ ಆಭರಣ ಚಿನ್ನದ ಬೆಲೆ ಇಂದು ರೂ. 4,995 ಆಗಿದೆ. ಜಾಗತಿಕವಾಗಿ ನಡೆಯುವ ಹಲವು ಅಂಶಗಳು ಹಾಗೂ ಬದಲಾವಣೆಗಳ ಪ್ರಭಾವದಿಂದಾಗಿ ಚಿನ್ನದ ಬೆಲೆಯಲ್ಲಿ ನಿತ್ಯವೂ ವ್ಯತ್ಯಾಸಗಳು ನಡೆಯುತ್ತಲೇ ಇರುತ್ತವೆ. ಅಂತೆಯೇ ದೇಶದ ವಿವಿಧ ಭಾಗಗಳಲ್ಲೂ ಸಹ ಇದರ ಬೆಲೆಯಲ್ಲಿ ವ್ಯತ್ಯಾಸಗಳನ್ನು ಗಮನಿಸಬಹುದು. (ಸಾಂದರ್ಭಿಕ ಚಿತ್ರ)
ನಿತ್ಯ ದೇಶದ ಮಹಾನಗರಗಳಲ್ಲಿ ಚಿನ್ನದ ಬೆಲೆಯಲ್ಲಿ ಅಲ್ಪ ವ್ಯತ್ಯಾಸಗಳಾಗುವುದನ್ನು ಸಾಮಾನ್ಯವಾಗಿ ಗಮನಿಸಬಹುದು. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 50,000 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 50,560, ರೂ. 49,950, ರೂ. 49,950 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 50,100 ರೂ. ಆಗಿದೆ. (ಸಾಂದರ್ಭಿಕ ಚಿತ್ರ)
ದೇಶದ ಪ್ರಮುಖ ನಗರಗಳ ಚಿನ್ನದ ಬೆಲೆ
ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರಗಳ ಕುರಿತು ಒಂದು ನೋಟ ಬೀರೋಣ. ಒಂದು ಗ್ರಾಂ (1GM) 22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,995 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,449 ಎಂಟು ಗ್ರಾಂ (8GM) 22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 39,960 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 43,592 (ಸಾಂದರ್ಭಿಕ ಚಿತ್ರ)
ಇನ್ನು ಬೆಳ್ಳಿಯ ವಿಷಯಕ್ಕೆ ಬಂದರೆ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಸ್ವಲ್ಪ ಹೆಚ್ಚಳವಾಗಿದೆ. ಚಿನ್ನದಂತೆಯೇ ಬೆಳ್ಳಿ ಬೆಲೆಯಲ್ಲೂ ಏರಿಳಿತ ಸಾಮಾನ್ಯವಾಗಿದೆ. ಒಂದು ಕೆಜಿ ಬೆಳ್ಳಿಯ ಇಂದಿನ ಮಾರುಕಟ್ಟೆ ಬೆಲೆ ರೂ. 69,300 ಗಳಷ್ಟಿದೆ. ಕಳೆದ ಎರಡು ವಾರಗಳನ್ನು ಗಮನಿಸಿದರೆ ಸದ್ಯ ಬೆಳ್ಳಿ ಬೆಲೆಯಲ್ಲಿ ಸಾಕಷ್ಟು ಏರಿಕೆಯೇ ಆಗಿರುವುದನ್ನು ಗಮನಿಸಬಹುದು. (ಸಾಂದರ್ಭಿಕ ಚಿತ್ರ)
ಬೆಂಗಳೂರು ನಗರ ದಲ್ಲಿ ನೋಡುವುದಾದರೆ ಬೆಳ್ಳಿ ಬೆಲೆಯಲ್ಲಿ ನಿನ್ನೆಗಿಂತ ಸ್ವಲ್ಪ ಏರಿಕೆಯಾಗಿದೆ. ನಗರದಲ್ಲಿ ಇಂದು ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ಬೆಲೆಗಳು ಕ್ರಮವಾಗಿ ರೂ. 730, ರೂ. 7,300 ಹಾಗೂ ರೂ. 73,000 ಗಳಾಗಿವೆ. ಮಿಕ್ಕಂತೆ ದೇಶದ ಇತರೆ ಮಹಾನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 73,000 ಆಗಿದ್ದರೆ, ದೆಹಲಿಯಲ್ಲಿ ರೂ. 69,300, ಮುಂಬೈನಲ್ಲಿ ರೂ. 69,300 ಹಾಗೂ ಕೊಲ್ಕತ್ತದಲ್ಲೂ ರೂ. 69,300 ಗಳಾಗಿದೆ. (ಸಾಂದರ್ಭಿಕ ಚಿತ್ರ)