BHIM UPI : ಬ್ಯಾಂಕ್ ಗ್ರಾಹಕರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ರುಪೇ ಡೆಬಿಟ್ ಕಾರ್ಡ್ ವಹಿವಾಟುಗಳನ್ನು ಉತ್ತೇಜಿಸಲು ಮತ್ತು BHIM UPI ಮೂಲಕ ಕಡಿಮೆ ಮೌಲ್ಯದ ವಹಿವಾಟುಗಳನ್ನು ಹೆಚ್ಚಿಸಲು ಬ್ಯಾಂಕ್ಗಳಿಗೆ ಕೇಂದ್ರ ಸರ್ಕಾರದ ಪ್ರೋತ್ಸಾಹದ ಮೇಲೆ ಯಾವುದೇ GST ಇರುವುದಿಲ್ಲ. ಹಣಕಾಸು ಸಚಿವಾಲಯ ಇತ್ತೀಚೆಗೆ ಈ ವಿಷಯವನ್ನು ಬಹಿರಂಗಪಡಿಸಿದೆ. ಇದರಿಂದ ಎಷ್ಟೋ ಜನರಿಗೆ ಸಮಾಧನ ಸಿಗಲಿದೆ ಎನ್ನಬಹುದು.