Karnataka Budget 2023: ಸರ್ಕಾರಿ ನೌಕರರಿಗೆ ನಿರಾಸೆ; ಬಜೆಟ್​​ನಲ್ಲಿ 7ನೇ ವೇತನ ಆಯೋಗದ ಬಗ್ಗೆ ಪ್ರಸ್ತಾಪವೇ ಇಲ್ಲ

ಸಾಕಷ್ಟು ನಿರೀಕ್ಷೆಗಳೊಂದಿಗೆ ರಾಜ್ಯ ಬಜೆಟ್ ಅನ್ನು ಎದುರು ನೋಡುತ್ತಿದ್ದ ಸರ್ಕಾರಿ ಉದ್ಯೋಗಿಗಳಿಗೆ ನಿರಾಸೆಯಾಗಿದೆ. 2023-24ರ ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು 7ನೇ ವೇತನ ಆಯೋಗದ ಬಗ್ಗೆ ಪ್ರಸ್ತಾಪವನ್ನೇ ಮಾಡಲಿಲ್ಲ.

First published:

  • 17

    Karnataka Budget 2023: ಸರ್ಕಾರಿ ನೌಕರರಿಗೆ ನಿರಾಸೆ; ಬಜೆಟ್​​ನಲ್ಲಿ 7ನೇ ವೇತನ ಆಯೋಗದ ಬಗ್ಗೆ ಪ್ರಸ್ತಾಪವೇ ಇಲ್ಲ

    ರಾಜ್ಯ ಸರ್ಕಾರ ಬಜೆಟ್ ನಲ್ಲಿ 7ನೇ ವೇತನ ಆಯೋಗದ ಜಾರಿಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಇದರಿಂದ ನಿರೀಕ್ಷೆ ಇಟ್ಟುಕೊಂಡಿದ್ದ ನೌಕರರಿಗೆ ನಿರಾಸೆಯಾಗಿದೆ. 7ನೇ ವೇತನ ಆಯೋಗದ ಜಾರಿ ಬಗ್ಗೆ ನೌಕರರರಿಗೆ ಸರ್ಕಾರ ಭರವಸೆ ನೀಡಿತ್ತು. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Karnataka Budget 2023: ಸರ್ಕಾರಿ ನೌಕರರಿಗೆ ನಿರಾಸೆ; ಬಜೆಟ್​​ನಲ್ಲಿ 7ನೇ ವೇತನ ಆಯೋಗದ ಬಗ್ಗೆ ಪ್ರಸ್ತಾಪವೇ ಇಲ್ಲ

    ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಬಜೆಟ್ ಗೂ ಮುನ್ನ ವಿಶ್ವಾಸ ವ್ಯಕ್ತಪಡಿಸಿದ್ದರು. ರಾಜ್ಯ ಬಜೆಟ್ನಲ್ಲಿ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಿದ್ದರು. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Karnataka Budget 2023: ಸರ್ಕಾರಿ ನೌಕರರಿಗೆ ನಿರಾಸೆ; ಬಜೆಟ್​​ನಲ್ಲಿ 7ನೇ ವೇತನ ಆಯೋಗದ ಬಗ್ಗೆ ಪ್ರಸ್ತಾಪವೇ ಇಲ್ಲ

    ಸರ್ಕಾರಿ ನೌಕರರ ವಿಚಾರವಾಗಿ ಮುಖ್ಯಮಂತ್ರಿ ಸ್ಪಂದಿಸುತ್ತಿದ್ದಾರೆ. ಮಾರ್ಚ್ ಅಂತ್ಯದೊಳಗೆ ಸರ್ಕಾರಿ ಆದೇಶ ಹೊರಬೀಳಬೇಕಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಜತೆ ಚರ್ಚೆ ನಡೆಸಲಾಗಿದೆ. ಇದಕ್ಕೆ ಬಜೆಟ್ನಲ್ಲಿ ಅನುದಾನ ಮೀಸಲಿಡುವ ಸಾಧ್ಯತೆ ಇದೆ ಎಂದು ಹೇಳಿದ್ದರು. ಆದರೆ ಇವರ ನಿರೀಕ್ಷೆ ಸುಳ್ಳಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Karnataka Budget 2023: ಸರ್ಕಾರಿ ನೌಕರರಿಗೆ ನಿರಾಸೆ; ಬಜೆಟ್​​ನಲ್ಲಿ 7ನೇ ವೇತನ ಆಯೋಗದ ಬಗ್ಗೆ ಪ್ರಸ್ತಾಪವೇ ಇಲ್ಲ

    ಸರ್ಕಾರಿ ನೌಕರರ ವೇತನ ಪರಿಷ್ಕರಣೆ, ವೇತನ ಸೌಲಭ್ಯ, ಹೊಸ ವೇತನ ರಚನೆ ಹೀಗೆ ವಿವಿಧ ವಿಚಾರಗಳನ್ನು ಪ್ರಸ್ತಾಪ ಮಾಡಿ ಮನವಿ ಸಲ್ಲಿಸಲಾಗಿತ್ತು. ಇವುಗಳ ಬಗ್ಗೆ ಬಜೆಟ್ ನಲ್ಲಿ ಘೋಷಿಸಲಾಗುವುದು ಎಂದು ಭಾವಿಸಿದ್ದರು. ಆದರೆ ಸದ್ಯಕ್ಕೆ ಯಾವುದೇ ಬೇಡಿಕೆ ಈಡೇರಿಲ್ಲ.

    MORE
    GALLERIES

  • 57

    Karnataka Budget 2023: ಸರ್ಕಾರಿ ನೌಕರರಿಗೆ ನಿರಾಸೆ; ಬಜೆಟ್​​ನಲ್ಲಿ 7ನೇ ವೇತನ ಆಯೋಗದ ಬಗ್ಗೆ ಪ್ರಸ್ತಾಪವೇ ಇಲ್ಲ

    ಇನ್ನು ಕರ್ನಾಟಕ ಸರ್ಕಾರ ರಚನೆ ಮಾಡಿರುವ ಸುಧಾಕರ್ ರಾವ್ ಅಧ್ಯಕ್ಷತೆಯ ಕರ್ನಾಟಕ ರಾಜ್ಯ 7ನೇ ವೇತನ ಆಯೋಗದ ಪ್ರಶ್ನಾವಳಿಗೆ ಉತ್ತರಿಸುವ ದಿನಾಂಕವನ್ನು ಫೆಬ್ರವರಿ 28ರ ತನಕ ವಿಸ್ತರಣೆ ಮಾಡಲಾಗಿದೆ.

    MORE
    GALLERIES

  • 67

    Karnataka Budget 2023: ಸರ್ಕಾರಿ ನೌಕರರಿಗೆ ನಿರಾಸೆ; ಬಜೆಟ್​​ನಲ್ಲಿ 7ನೇ ವೇತನ ಆಯೋಗದ ಬಗ್ಗೆ ಪ್ರಸ್ತಾಪವೇ ಇಲ್ಲ

    ಆದರೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಈಗಾಗಲೇ ಆಯೋಗಕ್ಕೆ ತನ್ನ ಉತ್ತರವನ್ನು ಸಲ್ಲಿಕೆ ಮಾಡಿದೆ. ಈ ಉತ್ತರದಲ್ಲಿ ಹಲವಾರು ಅಂಶಗಳನ್ನು ಸಂಘ ಪ್ರಸ್ತಾಪ ಮಾಡಿದೆ. ಅಂಕಿ-ಸಂಖ್ಯೆಗಳ ಸಮೇತ ವಿವರಣೆ ನೀಡಿದೆ.

    MORE
    GALLERIES

  • 77

    Karnataka Budget 2023: ಸರ್ಕಾರಿ ನೌಕರರಿಗೆ ನಿರಾಸೆ; ಬಜೆಟ್​​ನಲ್ಲಿ 7ನೇ ವೇತನ ಆಯೋಗದ ಬಗ್ಗೆ ಪ್ರಸ್ತಾಪವೇ ಇಲ್ಲ

    ಒಟ್ಟಾರೆ ಸಾಕಷ್ಟು ನಿರೀಕ್ಷೆಗಳೊಂದಿಗೆ ರಾಜ್ಯ ಬಜೆಟ್ ಎದುರು ನೋಡುತ್ತಿದ್ದ ಸರ್ಕಾರಿ ಉದ್ಯೋಗಿಗಳಿಗೆ ಭಾರೀ ನಿರಾಸೆಯಾಗಿದೆ. ಸರ್ಕಾರಿ ನೌಕರರ ಅಸಮಾಧಾನವನ್ನು ತಣಿಸಲು ಸಿಎಂ ಬೊಮ್ಮಾಯಿ ಮುಂದಾಗುತ್ತಾರೆಯೇ ಎಂದು ಕಾದು ನೋಡಬೇಕಿದೆ.

    MORE
    GALLERIES