ಇದಕ್ಕಾಗಿ ನೀವು ನಿಮ್ಮ ಖಾತೆಗಳಿಂದ ವಹಿವಾಟುಗಳನ್ನು ಮುಂದುವರಿಸಬೇಕಾಗುತ್ತದೆ. ನೀವು ದೀರ್ಘಕಾಲದವರೆಗೆ ಸಕ್ರಿಯವಾಗಿಲ್ಲದಿದ್ದರೆ, ಬ್ಯಾಂಕ್ ನಿಮ್ಮ ಖಾತೆಯನ್ನು ಮುಚ್ಚಬಹುದು. ಅದಕ್ಕಾಗಿಯೇ ನೀವು ನಿಮ್ಮ ಎಲ್ಲಾ ಖಾತೆಗಳನ್ನು ಬಳಸುತ್ತಿರಬೇಕು. ಆದರೆ ಬಹು ಬ್ಯಾಂಕ್ ಖಾತೆಗಳನ್ನು ತೆರೆಯುವಾಗ ನೀವು ನೆನಪಿನಲ್ಲಿಟ್ಟುಕೊಳ್ಳಬೇಕಾದ ಹಲವಾರು ವಿಷಯಗಳಿವೆ.(ಸಾಂಕೇತಿಕ ಚಿತ್ರ)
ಪ್ರಸ್ತುತ ಬಹುತೇಕ ಎಲ್ಲಾ ಬ್ಯಾಂಕ್‌ಗಳು ಸಂಬಳ ಖಾತೆಯನ್ನು ಹೊರತುಪಡಿಸಿ ಉಳಿತಾಯ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಿವೆ. ಅಂದರೆ ನಿಮ್ಮ ಬ್ಯಾಂಕ್ ಖಾತೆಯಲ್ಲಿ ನೀವು ಯಾವಾಗಲೂ ಕನಿಷ್ಟ ಬ್ಯಾಲೆನ್ಸ್ ಅನ್ನು ಕಾಪಾಡಿಕೊಳ್ಳಬೇಕು. ನೀವು ಇದನ್ನು ಮಾಡದಿದ್ದರೆ ನಿಮ್ಮ ಬ್ಯಾಂಕ್ ಖಾತೆಯಿಂದ ಮೊತ್ತವನ್ನು ಕಡಿತಗೊಳಿಸಲಾಗುತ್ತದೆ.(ಸಾಂಕೇತಿಕ ಚಿತ್ರ)