ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್), ಸುಕನ್ಯಾ ಸಮೃದ್ಧಿ ಯೋಜನೆ (ಎಸ್ಎಸ್ವೈ), ಹಿರಿಯ ನಾಗರಿಕರ ಉಳಿತಾಯ ಯೋಜನೆ, ಎನ್ಎಸ್ಸಿ, ಕೆವಿಪಿ ಮುಂತಾದ ಯೋಜನೆಗಳ ಮೇಲಿನ ಬಡ್ಡಿದರಗಳು ಈ ವಾರದಿಂದಲೇ ಹೆಚ್ಚಾಗುವ ಸಾಧ್ಯತೆಯಿದೆ. ಆರ್ಬಿಐನ ರೆಪೊ ದರ ಏರಿಕೆಯ ಹಿನ್ನೆಲೆಯಲ್ಲಿ ಬ್ಯಾಂಕ್ಗಳು ಎಫ್ಡಿ ಮೇಲಿನ ಬಡ್ಡಿದರವನ್ನು ಹೆಚ್ಚಿಸುತ್ತಿವೆ. ಈ ಆದೇಶದಲ್ಲಿ ಕೇಂದ್ರ ಸರ್ಕಾರವು ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರವನ್ನೂ ಹೆಚ್ಚಿಸುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.
ಕೇಂದ್ರ ಸರ್ಕಾರವು ಸಾಮಾನ್ಯವಾಗಿ ತ್ರೈಮಾಸಿಕ ಆಧಾರದ ಮೇಲೆ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳನ್ನು ಪರಿಶೀಲಿಸುತ್ತದೆ. ಈ ಸಮಯದಲ್ಲಿ ಬಡ್ಡಿದರ ಹೆಚ್ಚು ಅಥವಾ ಕಡಿಮೆ ಮಾಡಬಹುದು. ಇಲ್ಲದಿದ್ರೆ ಬಡ್ಡಿದರ ಸ್ಥಿರವಾಗಿರಿಸಿಕೊಳ್ಳಬಹುದು. ಜನವರಿಯಿಂದ ಮಾರ್ಚ್ ತ್ರೈಮಾಸಿಕಕ್ಕೆ ಸಂಬಂಧಿಸಿದಂತೆ ಈ ವಾರ ಸರ್ಕಾರ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಗಳಿವೆ. (ಸಾಂದರ್ಭಿಕ ಚಿತ್ರ)