ವಿಶ್ವದಾದ್ಯಂತ ತಂತ್ರಜ್ಞಾನದಲ್ಲಿ ವ್ಯಾಪಕವಾದ ಬೆಳವಣಿಗೆಯಾಗುತ್ತಿದ್ದು, ಇದು ಹೊಸ ಹೊಸ ಆವಿಷ್ಕಾರಗಳಿಗೆ ನಾಂದಿಯಾಡುತ್ತಿದೆ. ಈ ವಿಚಾರದಲ್ಲಿ ಭಾರತ ಕೂಡ ಹಿಂದೆ ಬಿದ್ದಿಲ್ಲ. ಇಲ್ಲಿನ ಇಂಜಿನಿಯರ್‌ಗಳು ಮತ್ತು ಯುವ ತಂತ್ರಜ್ಞರು ಲಭ್ಯವಿರುವ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಅದಕ್ಕೆ ತಮ್ಮ ಬುದ್ಧಿವಂತಿಕೆಯನ್ನು ಸೇರಿಸುವ ಮೂಲಕ ಹೊಸ ಆವಿಷ್ಕಾರಗಳನ್ನು ಮಾಡುತ್ತಿದ್ದಾರೆ.