LPG Price Hike: ಹೊಸ ವರ್ಷದ ಮೊದಲ ದಿನವೇ ಶಾಕ್; ಏರಿಕೆಯಾಯ್ತು LPG ಸಿಲಿಂಡರ್ ಬೆಲೆ
LPG Cylinder Price Hike: ಹೊಸ ವರ್ಷದ ಮೊದಲ ದಿನ ತೈಲ ಕಂಪನಿಗಳು ಜನಸಾಮಾನ್ಯರಿಗೆ ಶಾಕ್ ನೀಡಿವೆ. ಇಂದು ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ಗ್ಯಾಸ್ ಬೆಲೆ ಎಷ್ಟು ಮತ್ತು ಯಾವ ನಗರದಲ್ಲಿ ದರ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.
ತೈಲ ಕಂಪನಿಗಳು 2023 ರ ಮೊದಲ ದಿನದಲ್ಲಿ LPG ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿವೆ. ದೆಹಲಿಯಲ್ಲಿ 19 ಕೆಜಿಯ ವಾಣಿಜ್ಯ ಸಿಲಿಂಡರ್ ಬೆಲೆ 25 ರೂಪಾಯಿ ಏರಿಕೆಯಾಗಿದೆ. (ಸಾಂದರ್ಭಿಕ ಚಿತ್ರ)
2/ 9
ಬೆಲೆ ಏರಿಕೆಯೊಂದಿಗೆ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1,769 ರೂಪಾಯಿ ಆಗಿದೆ. ಕೋಲ್ಕತ್ತಾದಲ್ಲಿ 1,870 ರೂ, ಮುಂಬೈನಲ್ಲಿ 19 ಕೆಜಿಯ ವಾಣಿಜ್ಯ ಸಿಲಿಂಡರ್ ಬೆಲೆ 1,917 ರೂಪಾಯಿ ಆಗಿದೆ. (ಸಾಂದರ್ಭಿಕ ಚಿತ್ರ)
3/ 9
ಬೆಂಗಳೂರಿನಲ್ಲಿ 19 ಕೆಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಗೊಂಡಿಲ್ಲ. ಬೆಂಗಳೂರಿನಲ್ಲಿ ಬೆಲೆಗಳು ಸ್ಥಿರವಾಗಿವೆ. ಬೆಂಗಳೂರಿನಲ್ಲಿ 1,685 ರೂಪಾಯಿ ಆಗಿದೆ.
4/ 9
ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಮಾತ್ರ ಹೆಚ್ಚಿಸಿರುವುದು ಜನಸಾಮಾನ್ಯರಿಗೆ ಸಮಾಧಾನ ತಂದಿದೆ. ಗೃಹಬಳಕೆಗೆ ಬಳಸುವ 14.2 ಕೆಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. (ಸಾಂದರ್ಭಿಕ ಚಿತ್ರ )
5/ 9
14.2 ಕೆಜಿ ಗೃಹ ಬಳಕೆ ಸಿಲಿಂಡರ್ ಬೆಲೆ ಸ್ಥಿರವಾಗಿದೆ. ಕೊನೆಯದಾಗಿ ಜುಲೈ 6 ರಂದು ಗೃಹ ಬಳಕೆಯ ಸಿಲಿಂಡರ್ ಬೆಲೆ 50 ರೂಪಾಯಿ ಏರಿಕೆಯಾಗಿತ್ತು. ತದನಂತರ ಗೃಹ ಬಳಕೆ ಸಿಲಿಂಡರ್ ಬೆಲೆಗಳು ಸ್ಥಿರವಾಗಿವೆ. (ಸಾಂದರ್ಭಿಕ ಚಿತ್ರ)
6/ 9
ಬೆಂಗಳೂರಿನಲ್ಲಿ 14 ಕೆಜಿ ಸಿಲಿಂಡರ್ ಬೆಲೆ ಸ್ಥಿರವಾಗಿದೆ. ಸದ್ಯ ಗೃಹ ಬಳಕೆ ಸಿಲಿಂಡರ್ ಬೆಲೆ 1,055 ರೂಪಾಯಿ ಆಗಿದೆ. (ಸಾಂದರ್ಭಿಕ ಚಿತ್ರ)
7/ 9
ದೆಹಲಿಯಲ್ಲಿ 14.2 ಕೆಜಿ ಗ್ಯಾಸ್ ಸಿಲಿಂಡರ್ 1053 ರೂಪಾಯಿ, ಮುಂಬೈನಲ್ಲಿ 1052.50 ಮತ್ತು ಚೆನ್ನೈನಲ್ಲಿ 1068.50 ನಲ್ಲಿ ಸ್ಥಿರವಾಗಿದೆ. ಕೋಲ್ಕತ್ತಾದಲ್ಲಿ ಗೃಹ ಬಳಕೆಯ LPG ಸಿಲಿಂಡರ್ ಬೆಲೆ ರೂ.1079 ಆಗಿದೆ. (ಸಾಂದರ್ಭಿಕ ಚಿತ್ರ)
8/ 9
ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಏರಿಕೆಯು ಸಾಮಾನ್ಯ ಜನರ ಮೇಲೆ ನೇರವಾಗಿ ಪರಿಣಾಮ ಬೀರುವುದಿಲ್ಲ. ಆದರೆ ಈ ಸಿಲಿಂಡರ್ ಗಳನ್ನು ರೆಸ್ಟೋರೆಂಟ್, ಟಿಫಿನ್ ಸೆಂಟರ್, ಬೇಕರಿ, ಸ್ವೀಟ್ ಶಾಪ್ ಗಳಲ್ಲಿ ಬಳಸುತ್ತಾರೆ. (ಸಾಂದರ್ಭಿಕ ಚಿತ್ರ)
9/ 9
ಸಿಲಿಂಡರ್ ಬೆಲೆ ಏರಿಕೆಯಿಂದ ತಮ್ಮ ಉತ್ಪನ್ನಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ. ಹಾಗಾಗಿ ಇದರ ಪರಿಣಾಮ ಸಾಮಾನ್ಯ ಜನರ ಮೇಲೆ ಬೀಳುತ್ತದೆ. (ಸಾಂದರ್ಭಿಕ ಚಿತ್ರ)