ಇದೀಗ ನೋಟುಗಳನ್ನು ಹಿಂಪಡೆದುಕೊಳ್ಳಲು ನಿರ್ಧರಿಸಿದ್ದು, ಸೆಪ್ಟೆಂಬರ್ 30ರ ವರೆಗೆ ಗ್ರಾಹಕರು ತಮ್ಮ ಬಳಿ ಇರುವ ನೋಟುಗಳನ್ನು ವಿವಿಧ ಬ್ಯಾಂಕ್ಗಳಲ್ಲಿ ಠೇವಣಿ ಮಾಡಲು ಮತ್ತು ವಿನಿಮಯ ಮಾಡಿಕೊಳ್ಳಲು ಸೂಚನೆ ನೀಡಿದೆ. ಈ ವಿನಿಮಯಕ್ಕೆ ಯಾವುದೇ ಶುಲ್ಕವನ್ನು ಪಾವತಿಸದೆ ಹಣವನ್ನು ವಿನಿಮಯ ಮಾಡಿಕೊಳ್ಳಬಹುದು. ಹಿರಿಯ ನಾಗರಿಕರು, ಅಂಗವಿಕಲರು ಇತ್ಯಾದಿಗಳಿಗೆ ವಿಶೇಷ ವ್ಯವಸ್ಥೆ ಮಾಡಲು ಬ್ಯಾಂಕ್‌ಗಳಿಗೆ ಸೂಚಿಸಲಾಗಿದೆ.

ಇನ್ನು 2,000 ರೂಪಾಯಿ ಮುಖಬೆಲೆಯ ನೋಟುಗಳನ್ನು ಗ್ರಾಹಕರಿಗೆ ವಿತರಿಸದಂತೆ ದೇಶದ ಎಲ್ಲಾ ಬ್ಯಾಂಕ್ ಗಳಿಗೆ ಆರ್ಬಿಐ ಸೂಚಿಸಿದೆ. ಆದರೆ ಸಾಮಾನ್ಯ ಜನರು ತಮ್ಮ ದೈನಂದಿನ ವಹಿವಾಟಿನಲ್ಲಿ 2000 ರೂಪಾಯಿ ನೋಟುಗಳನ್ನು ಬಳಸುವುದನ್ನು ಮುಂದುವರಿಸಬಹುದು. ಆದಾಗ್ಯೂ, ಈ ನೋಟುಗಳನ್ನು ಸೆಪ್ಟೆಂಬರ್ 30, 2023 ರಂದು ಅಥವಾ ಮೊದಲು ಬದಲಾಯಿಸಿಕೊಳ್ಳಬೇಕು ಅಥವಾ ಠೇವಣಿ ಮಾಡಿಬೇಕು.
ನವೆಂಬರ್ 8, 2016 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ 500 ಮತ್ತು 1,000 ರೂಪಾಯಿ ನೋಟ್ ಬ್ಯಾನ್ ಮಾಡುವುದಾಗಿ ಘೋಷಿಸಿದ್ದರು. ನೋಟು ಅಮಾನ್ಯೀಕರಣ ನೀತಿಯನ್ನು ಜಾರಿಗೆ ತರುವ ಮುಖ್ಯ ಕಾರಣ ಕಪ್ಪುಹಣಕ್ಕೆ(ಬ್ಲ್ಯಾಕ್‌ಮನಿ) ಕಡಿವಾಣ ಹಾಕುವುದು, ನಕಲಿ ನೋಟುಗಳನ್ನು ನಿರ್ಮೂಲನೆ ಮಾಡುವುದು ಮತ್ತು ಡಿಜಿಟಲ್ ವಹಿವಾಟುಗಳನ್ನು ಉತ್ತೇಜಿಸಲು ಈ ಕ್ರಮ ಕೈಗೊಂಡಿದ್ದಾಗಿ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿತ್ತು.