ನಿನ್ನೆಗೆ ಹೋಲಿಸಿದರೆ ಇಂದು ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲವಾದರೂ ಇತ್ತ ಬೆಳ್ಳಿಯ ಬೆಲೆಯಲ್ಲಿ ಅಲ್ಪ ಏರಿಕೆಯಾಗಿದೆ. ಇಂದು ಒಂದು ಕೆಜಿ ಬೆಳ್ಳಿ ಬೆಲೆ ಮಾರುಕಟ್ಟೆಯಲ್ಲಿ 73,400 ರೂಪಾಯಿಗಳಷ್ಟಿದೆ. ಚಿನ್ನದಂತೆ ಇತ್ತೀಚಿನ ಕೆಲ ಸಮಯದಿಂದ ಬೆಳ್ಳಿಯೂ ಸಹ ಉತ್ತಮ ಹೂಡಿಕೆಯ ಸಾಧನವಾಗಿ ಗುರುತಿಸಲ್ಪಟ್ಟಿದ್ದು ಹೂಡಿಕೆದಾರರಲ್ಲಿ ಸಾಕಷ್ಟು ಜನಪ್ರೀಯತೆ ಹೊಂದಿದೆ.
ಬೆಂಗಳೂರು ನಗರ ನೋಡುವುದಾದರೆ ಇಂದು ನಗರದಲ್ಲಿ ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ಬೆಲೆಗಳು ಕ್ರಮವಾಗಿ ರೂ. 760, ರೂ. 7,600 ಹಾಗೂ ರೂ. 76,000 ಗಳಾಗಿವೆ. ಮಿಕ್ಕಂತೆ ದೇಶದ ಇತರೆ ಮಹಾನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 76,000 ಆಗಿದ್ದರೆ, ದೆಹಲಿಯಲ್ಲಿ ರೂ. 73,400, ಮುಂಬೈನಲ್ಲಿ ರೂ. 73,400 ಹಾಗೂ ಕೊಲ್ಕತ್ತದಲ್ಲೂ ರೂ. 73,400 ಗಳಾಗಿದೆ.