ಇದೀಗ ಆರ್‌ಬಿಐ ಈ 2000 ರೂಪಾಯಿ ನೋಟುಗಳನ್ನು ಹಿಂಪಡೆಯುವುದಾಗಿ ಘೋಷಣೆ ಮಾಡಿದೆ. ಸೆಪ್ಟೆಂಬರ್ 30 ರೊಳಗೆ ಬ್ಯಾಂಕ್‌ಗಳಲ್ಲಿ 2,000 ರೂಪಾಯಿ ನೋಟುಗಳನ್ನು ಬದಲಾಯಿಸಲು ಅಥವಾ ಠೇವಣಿ ಮಾಡಲು ಆರ್‌ಬಿಐ ಜನರಿಗೆ ಸಲಹೆ ನೀಡಿದೆ. ಅಲ್ಲಿಯವರೆಗೆ 2,000 ರೂಪಾಯಿ ನೋಟು ಕಾನೂನುಬದ್ಧವಾಗಿರುತ್ತದೆ ಎಂದು ಸ್ಪಷ್ಟಪಡಿಸಿದೆ.