UPSC Mains Resalt: ಯುಪಿಎಸ್ಸಿ ಮುಖ್ಯ ಪರೀಕ್ಷೆಯ ರಿಸಲ್ಟ್ ಔಟ್: ಸಂಪೂರ್ಣ ಮಾಹಿತಿ ಇಲ್ಲಿದೆ
UPSC CSE Mains Resalt: ಕೇಂದ್ರ ಲೋಕಸೇವಾ ಆಯೋಗವು ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆ 2022ರ ಫಲಿತಾಂಶವನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು ಆಯೋಗದ ಅಧಿಕೃತ ವೆಬ್ ಸೈಟ್ upsc.gov.in ಮೂಲಕ ಪರಿಶೀಲಿಸಬಹುದು.
ಯುಪಿಎಸ್ ಸಿ ಮುಖ್ಯ ಪರೀಕ್ಷೆಯನ್ನು ಸೆಪ್ಟೆಂಬರ್ 16 ರಿಂದ 25ರವರೆಗೆ ನಡೆದಿತ್ತು. ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಸಿವಿಲ್ ಸರ್ವೀಸಸ್ ಮುಖ್ಯ ಪರೀಕ್ಷೆಯನ್ನು ವ್ಯಕ್ತಿನಿಷ್ಠ ವಿಧಾನದಲ್ಲಿ ನಡೆಸಲಾಗಿತ್ತು.
2/ 8
ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ರೋಲ್ ಸಂಖ್ಯೆಯನ್ನು ಆಯೋಗವು ತನ್ನ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಿದೆ.ಯುಪಿಎಸ್ ಸಿ ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಸಂದರ್ಶನ/ವ್ಯಕ್ತಿತ್ವ ಪರೀಕ್ಷೆಗೆ ಕರೆಯಲಾಗುವುದು.
3/ 8
ಮುಂದಿನ ಹಂತದಲ್ಲಿ UPSC ಸಿವಿಲ್ ಸರ್ವೀಸಸ್ ಸಂದರ್ಶನವು 275 ಅಂಕಗಳಿಗೆ ಇರುತ್ತದೆ. ಇದರಲ್ಲಿ ಉತ್ತೀರ್ಣರಾಗಲು, ಅಭ್ಯರ್ಥಿಗಳು ಕನಿಷ್ಠ ಅಂಕಗಳನ್ನು ಪಡೆಯಬೇಕು.
4/ 8
ಸಂದರ್ಶನ ಮತ್ತು ವ್ಯಕ್ತಿತ್ವ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಐಎಎಸ್, ಐಪಿಎಸ್, ಐಎಫ್ ಎಸ್, ಐಆರ್ ಎಸ್ ಮತ್ತು ಐಆರ್ ಟಿಎಸ್ ಸೇರಿದಂತೆ ಕೇಂದ್ರ ನಾಗರಿಕ ಸೇವೆಗಳಿಗೆ ಪ್ರವೇಶ ಪಡೆಯುತ್ತಾರೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುತ್ತದೆ.
5/ 8
ವ್ಯಕ್ತಿತ್ವ ಪರೀಕ್ಷೆಗೆ ಹಾಜರಾಗಲು ಆಯೋಗವು ಶೀಘ್ರದಲ್ಲೇ ದಿನಾಂಕಗಳನ್ನು ಬಿಡುಗಡೆ ಮಾಡುತ್ತದೆ. ಸಂದರ್ಶನವು ದೆಹಲಿಯ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನಲ್ಲಿ ನಡೆಯಲಿದೆ.
6/ 8
UPSC ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಅರ್ಹತೆ, ಜಾತಿ ಪ್ರಮಾಣಪತ್ರ, ವಯಸ್ಸಿನ ಪ್ರಮಾಣಪತ್ರ, ಅಂಗವೈಕಲ್ಯ ಪ್ರಮಾಣಪತ್ರ ಸೇರಿದಂತೆ ಇತರ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕಾಗುತ್ತದೆ.
7/ 8
ಫಲಿತಾಂಶವನ್ನು ಈ ರೀತಿ ಪರಿಶೀಲಿಸಿ: ಮೊದಲಿಗೆ UPSC upsc.gov.in ನ ಅಧಿಕೃತ ಸೈಟ್ ಗೆ ಹೋಗಿ. ನಂತರ ಮುಖ್ಯ ಪುಟದಲ್ಲಿರುವ ನಾಗರಿಕ ಸೇವೆಗಳ ಮುಖ್ಯ ಫಲಿತಾಂಶ 2022 ಲಿಂಕ್ ಮೇಲೆ ಕ್ಲಿಕ್ ಮಾಡಿ.
8/ 8
ಅಭ್ಯರ್ಥಿಗಳು ತಮ್ಮ ಹೆಸರು ಮತ್ತು ರೋಲ್ ನಂಬರ್ ಅನ್ನು ತೋರಿಸುವ PDF ಫೈಲ್ ತೆರೆಯುತ್ತದೆ. ಇಲ್ಲಿ ನಿಮ್ಮ ಹೆಸರನ್ನು ಹುಡುಕಿ. ಈಗ PDF ಅನ್ನು ಡೌನ್ ಲೋಡ್ ಮಾಡಿ ಮತ್ತು ಅದರ ಪ್ರಿಂಟ್ ಔಟ್ ತೆಗೆದುಕೊಳ್ಳಿ.