ಆರ್ಸಿಬಿಯ ಸ್ಟಾರ್ ಆಟಗಾರನಿಗೆ ಅಂಟಿದ ಕೊರೋನಾ?; ಸ್ಪೆಷಲ್ ವಾರ್ಡ್ನಲ್ಲಿ ಚಿಕಿತ್ಸೆ!
Coronavirus Effect: ಇತ್ತೀಚೆಗಷ್ಟೆ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಬಂದ ನಂತರ ಕೇನ್ ರಿಚರ್ಡಸನ್ಗೆ ಗಂಟಲು ನೋವು ಕಾಣಿಸಿಕೊಂಡಿದೆ. ಹೀಗಾಗಿ ಇವರು ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ.
ಮಾರಕ ಕೊರೋನಾ ವೈರಸ್ ಇಡೀ ವಿಶ್ವಕ್ಕೆ ಬೆದರಿಕೆ ಒಡ್ಡಿದ್ದು ಈವರೆಗೆ ಒಟ್ಟು 3,400 ಜನ ಸಾವನ್ನಪ್ಪಿದ್ದಾರೆ. ಈ ಸೋಂಕು ಭಾರತವನ್ನೂ ಪ್ರವೇಶಿಸಿದ್ದು ಕರ್ನಾಟಕದಲ್ಲಿ ಮೊದಲ ಬಲಿ ದಾಖಲಾಗಿದೆ.
2/ 11
ಸದ್ಯ ಮುಂಜಾಗ್ರತಾ ಕ್ರಮವಾಗಿ ಭಾರತ ವಿದೇಶಾಂಗ ಸಚಿವಾಲಯ ಎಲ್ಲಾ ದೇಶದ ಪ್ರವಾಸಿಗರ ವೀಸಾವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದೆ. ಹೀಗಾಗಿ ಮಾರ್ಚ್ 29 ರಿಂದ ನಡೆಯಲಿರುವ ಐಪಿಎಲ್ ಟೂರ್ನಿಗೂ ವಿದೇಶಿ ಆಟಗಾರರು ಅಲಭ್ಯರಾಗಲಿದ್ದಾರೆ.
3/ 11
ಅಲ್ಲದೆ, ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ನಡೆಯಬೇಕಿರುವ ಎರಡನೇ ಹಾಗೂ ಮೂರನೇ ಏಕದಿನ ಪಂದ್ಯ ಮುಚ್ಚಿದ ಬಾಗಿನಲ್ಲಿ ನಡೆಯಲಿವೆ. ಅಂದರೆ, ಪ್ರೇಕ್ಷಕರಿಲ್ಲದೆ ಖಾಲಿ ಮೈದಾನದಲ್ಲಿ ಈ ಎರಡೂ ಪಂದ್ಯ ಜರುಗಲಿವೆ.
4/ 11
ಹೀಗೆ ಕ್ರಿಕೆಟ್ ಜಗತ್ತಿಗೂ ಕಾಲಿಟ್ಟಿರುವ ಕೊರೋನ ಸದ್ಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರನಾಗಿರುವ, ಆಸ್ಟ್ರೇಲಿಯಾ ವೇಗಿ ಕೇನ್ ರಿಚರ್ಡಸನ್ ಅವರಿಗೂ ಅಂಟಿದೆಯಾ ಎಂಬ ಸಂಶಯ ಮೂಡಿದೆ.
5/ 11
ಇತ್ತೀಚೆಗಷ್ಟೆ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಬಂದ ನಂತರ ಕೇನ್ ರಿಚರ್ಡಸನ್ಗೆ ಗಂಟಲು ನೋವು ಕಾಣಿಸಿಕೊಂಡಿದೆ. ಹೀಗಾಗಿ ಇವರು ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ.
6/ 11
ಸದ್ಯ ರಿಚರ್ಡಸನ್ ಅವರ ಕಫ ಮತ್ತು ರಕ್ತಮಾದರಿಯನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿದೆ. ವರದಿ ಬಂದ ನಂತರ ಇವರು ಕ್ರಿಕೆಟ್ ಆಡುವ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ.
7/ 11
ಕೇನ್ಗೆ ಗಂಟಲು ಸಂಬಂಧಿತ ಕಾಯಿಯೆ ಬಂದಿದೆ. ನಮ್ಮ ವೈದ್ಯಕೀಯ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಆದರೆ, ಆಸ್ಟ್ರೇಲಿಯಾ ಸರ್ಕಾರ ಕೊರೋನಾ ಶಂಕಿತರನ್ನು ಪ್ರತ್ಯೇಕ ವಾರ್ಡ್ನಲ್ಲಿ ಇರಿಸುವಂತೆ ಹೊಸ ನಿಯಮ ಜಾರಿಗೆ ತಂದಿದೆ ಎಂದು ಆಸ್ಟ್ರೇಲಿಯಾದ ಕ್ರಿಕೆಟ್ ತಂಡದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
8/ 11
ನಾವು ಕೇನ್ ಅವರನ್ನು ಪ್ರತ್ಯೇಕ ವಾರ್ಡ್ನಲ್ಲಿ ಇರಿಸಿ ಚಿಕಿತ್ಸೆ ನೀಡುತ್ತಿದ್ದೇವೆ. ಕಳೆದ 14 ದಿನಗಳ ಹಿಂದೆ ಅವರು ವಿದೇಶಕ್ಕೆ ತೆರಳಿದ್ದರು. ಹೀಗಾಗಿ ಅಗತ್ಯ ಪರೀಕ್ಷೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.
9/ 11
ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಆರ್ಸಿಬಿ ಫ್ರಾಂಚೈಸಿ ಕೇನ್ ರಿಚರ್ಡಸನ್ ಅವರನ್ನು 4 ಕೋಟಿ ಕೊಟ್ಟು ತನ್ನ ತೆಕ್ಕೆಗೆ ಸೇರಿಸಿಕೊಂಡಿತ್ತು.
10/ 11
ಭಾರತದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಜನರೇ ಇಲ್ಲದ ಖಾಲಿ ಮೈದಾನದಲ್ಲಿ ಕ್ರಿಕೆಟ್ ಆಯೋಜಿಸುವಂತೆ ಕೇಂದ್ರ ಕ್ರೀಡಾ ಸಚಿವಾಲಯ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ನಿರ್ದೇಶನ ನೀಡಿದೆ.
11/ 11
ಇನ್ನೂ 12ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ವಿಚಾರದಲ್ಲೂ ಬಿಸಿಸಿಐ ಇದೇ ತೀರ್ಮಾನ ಕೈಗೋಳ್ಳುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿದೆ.