ಭಾರತದಲ್ಲಿ ದಿನೇ ದಿನೇ ಕೊರೋನಾ(Coronavirus) ಆರ್ಭಟ ಹೆಚ್ಚಾಗುತ್ತಿದೆ. ಫೆಬ್ರವರಿ 6 ರ ವೇಳೆಗೆ ಭಾರತದಲ್ಲಿ ಕೊರೋನಾ 3ನೇ ಅಲೆ(Corona 3rd Wave) ಗರಿಷ್ಠ ಮಟ್ಟ ತಲುಪಲಿದೆ ಎಂದು ತಜ್ಞರು ಹೇಳಿದ್ದಾರೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 3,33,533 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದು ನಿನ್ನೆಯ 3.37 ಲಕ್ಷ ಪ್ರಕರಣಗಳಿಗೆ ಹೋಲಿಸಿದರೆ ತುಸು ಕಡಿಮೆ ಇದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 26,299 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಕರ್ನಾಟಕದಲ್ಲಿ ನಿನ್ನೆ 50,210 ಹೊಸ ಕೊರೋನಾ ಕೇಸ್ಗಳು ಕಂಡುಬಂದಿವೆ. ಜೊತೆಗೆ ರಾಜ್ಯದಲ್ಲಿ 19 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ 19 ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ದರ ಶೇ.22.77 ರಷ್ಟಿದ್ದರೆ, ಸಾವಿನ ಪ್ರಮಾಣ ಶೇ. 0.03 ರಷ್ಟಿದೆ.