IND vs SA: ಮುಚ್ಚಿದ ಅಂಗಳದಲ್ಲಿ ಭಾರತ-ಆಫ್ರಿಕಾ ನಡುವಣ ಮುಂದಿನ ಎರಡೂ ಏಕದಿನ ಪಂದ್ಯ!
India vs South Africa ODI: ಭಾರತದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜನರೇ ಇಲ್ಲದ ಖಾಲಿ ಮೈದಾನದಲ್ಲಿ ಕ್ರಿಕೆಟ್ ಆಯೋಜಿಸುವಂತೆ ಕೇಂದ್ರ ಕ್ರೀಡಾ ಸಚಿವಾಲಯ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ನಿರ್ದೇಶನ ನೀಡಿದೆ.
ಧರ್ಮಶಾಲದ ಹಿಮಾಚಲ ಪ್ರದೇಶ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಿನ್ನೆ(ಮಾ. 12) ನಡೆಯಬೇಕಿದ್ದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೊದಲ ಏಕದಿನ ಪಂದ್ಯ ಮಳೆಯಿಂದಾಗಿ ರದ್ದಾಯಿತು.
2/ 10
ಸದ್ಯ ಉಳಿದಿರುವ ಎರಡು ಪಂದ್ಯಗಳ ಪೈಕಿ ಮಾರ್ಚ್ 15 ಭಾನುವಾರದಂದು ಲಕ್ನೋದಲ್ಲಿ ಎರಡನೇ ಪಂದ್ಯ ಹಾಗೂ ಮಾರ್ಚ್ 18 ಬುಧವಾರದಂದು ಕೋಲ್ಕತ್ತಾದಲ್ಲಿ ಅಂತಿಮ ಮೂರನೇ ಏಕದಿನ ಪಂದ್ಯ ನಡೆಯಲಿವೆ.
3/ 10
ಆದರೆ, ಈ ಎರಡೂ ಪಂದ್ಯ ಮುಚ್ಚಿದ ಬಾಗಿನಲ್ಲಿ ನಡೆಯಲಿವೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಅಂದರೆ, ಪ್ರೇಕ್ಷಕರಿಲ್ಲದೆ ಖಾಲಿ ಮೈದಾನದಲ್ಲಿ ಈ ಎರಡೂ ಪಂದ್ಯ ಜರುಗಲಿವೆ.
4/ 10
ಭಾರತದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜನರೇ ಇಲ್ಲದ ಖಾಲಿ ಮೈದಾನದಲ್ಲಿ ಕ್ರಿಕೆಟ್ ಆಯೋಜಿಸುವಂತೆ ಕೇಂದ್ರ ಕ್ರೀಡಾ ಸಚಿವಾಲಯ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ನಿರ್ದೇಶನ ನೀಡಿದೆ.
5/ 10
ಕೇಂದ್ರ ಕ್ರೀಡಾ ಸಚಿವಾಲಯ ಹಾಗೂ ಬಿಸಿಸಿಐ ಚರ್ಚೆ ನಡೆಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಾವು ಪ್ರೇಕ್ಷಕರಿಲ್ಲದೆ ಎರಡನೇ ಏಕದಿನ ಪಂದ್ಯವನ್ನು ನಡೆಸಲು ನಿರ್ಧರಿಸಿದ್ದೇವೆ ಎಂದು ಉತ್ತರ ಪ್ರದೇಶ ಕ್ರಿಕೆಟ್ ಮಂಡಳಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
6/ 10
ಹೀಗಾಗಿ ಭಾರತ- ಆಫ್ರಿಕಾ ನಡುವಣ ಎರಡನೇ ಹಾಗೂ ಮೂರನೇ ಏಕದಿನ ಪಂದ್ಯವನ್ನು ಅಭಿಮಾನಿಗಳು ಟಿ.ವಿ ಯಲ್ಲಿ ಮಾತ್ರ ನೋಡಬಹುದಾಗುದೆ.
7/ 10
ನ್ಯೂಜಿಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾ ಏಕದಿನ ಹಾಗೂ ಟೆಸ್ಟ್ ಸರಣಿಯಲ್ಲಿ ವೈಟ್ವಾಷ್ ಮುಖಭಂಗ ಅನುಭವಿಸಿದ ಬಳಿಕ ದ. ಆಫ್ರಿಕಾ ವಿರುದ್ಧ ಏಕದಿನ ಸರಣಿ ಆಡುತ್ತಿದೆ.
8/ 10
ಹೀಗಾಗಿ ಭಾರತಕ್ಕೆ ಈ ಸರಣಿ ತುಂಬಾನೇ ಮುಖ್ಯವಾಗಿರುವುದರಿಂದ ಆಟ ನೋಡಲು ಮೈದಾನದಲ್ಲಿ ಪ್ರೇಕ್ಷಕರು ಕಿಕ್ಕಿರಿದು ತುಂಬುದರಲ್ಲಿ ಅನುಮಾನವಿಲ್ಲ. ಇದರಿಂದ ಸೋಂಕು ಪೀಡಿತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುವ ಸಾಧ್ಯತೆಯಿದೆ. ಇದೇ ಕಾರಣಕ್ಕೆ ಖಾಲಿ ಮೈದಾನದಲ್ಲಿ ಕ್ರಿಕೆಟ್ ಆಡುವಂತೆ ಕೇಂದ್ರ ಸರ್ಕಾರ ಭಾರತ ಕ್ರಿಕೆಟ್ ತಂಡಕ್ಕೆ ಆದೇಶಿಸಿದೆ ನೀಡಿದೆ.
9/ 10
ಇನ್ನೂ 12ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ವಿಚಾರದಲ್ಲೂ ಬಿಸಿಸಿಐ ಇದೇ ತೀರ್ಮಾನ ಕೈಗೋಳ್ಳಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿದೆ.
10/ 10
ಇಷ್ಟೇ ಅಲ್ಲದೆ, ರಾಜತಾಂತ್ರಿಕ, ಆಡಳಿತಾತ್ಮಕ ಮತ್ತು ಉದ್ಯೋಗ ವೀಸಾಗಳನ್ನು ಹೊರತುಪಡಿಸಿ ಉಳಿದೆಲ್ಲ ವೀಸಾಗಳನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ಹೀಗಾಗಿ ಏಪ್ರಿಲ್ 15ನೇ ತಾರೀಕಿನ ವರೆಗೆ ವಿದೇಶಿ ಆಟಗಾರರು ಐಪಿಎಲ್ಗಾಗಿ ಭಾರತಕ್ಕೆ ಬರಲು ಸಾಧ್ಯವಾಗುವುದಿಲ್ಲ.