ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಕೊರೋನಾ ಸೋಂಕು ದೃಢಗೊಂಡಿದೆ. ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದು, ತಮ್ಮ ಸಂಪರ್ಕಕ್ಕೆ ಒಳಗಾದವರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ (ಫೋಟೋ; ಪ್ರತಾಪ್ ಸಿಂಹ ಸಾಮಾಜಿಕ ಜಾಲತಾಣ)
ಆಂಟಿಜೆನ್ ಟೆಸ್ಟ್ ನಲ್ಲಿ ವರದಿ ನೆಗಟಿವ್ ಬಂದಿದ್ದು, ಆರ್ಟಿ ಪಿಸಿಆರ್ನಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ
2/ 5
ಗೋಪಾಲಗೌಡ ಆಸ್ಪತ್ರೆಗೆ ಭೇಟಿ ನೀಡಿದ್ದ ಕಾರಣ ಟೆಸ್ಟ್ ಮಾಡಿಸಿದ್ದು, ಲಕ್ಷಣ ರಹಿತ ಸೋಂಕು ಕಂಡು ಬಂದಿದೆ. ಈ ಹಿನ್ನಲೆ ತಮ್ಮ ಸಂಪರ್ಕಕ್ಕೆ ಒಳಗಾದವರು ಮುನ್ನೆಚ್ಚರಿಕೆವಹಿಸುವಂತೆ ಮನವಿ ಮಾಡಿದ್ದಾರೆ
3/ 5
ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿರ್ವಹಣೆ ಸಂಬಂಧ ಕ್ರಮಗಳ ಅಧಿಕಾರಿಗಳ ಸಭೆಗಳಲ್ಲಿ ಪ್ರತಾಪ್ ಸಿಂಹ ಇಂದು ಭಾಗಿಯಾಗಿದ್ದರು
4/ 5
ಜಿಲ್ಲೆಯಲ್ಲಿ ಸೋಂಕಿತರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕ ಸಭೆಗಳನ್ನು ನಡೆಸುತ್ತಿದ್ದಾರೆ ಸಂಸದ ಪ್ರತಾಪ್ ಸಿಂಹ
5/ 5
ಕೋವಿಡ್ ಸೋಂಕು ಪತ್ತೆಯಾದ ಹಿನ್ನಲೆ ಐಸೋಲೇಷನ್ಗೆ ಒಳಗಾಗುತ್ತಿರುವುದಾಗಿ ತಿಳಿಸಿದ್ದಾರೆ