BS Yediyurappa- PM Narendra Modi Video Conference with BS Yediyurappa and other States Chief Ministers. ದೇಶದೆಲ್ಲೆಡೆ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ 21 ದಿನಗಳ ಕಾಲ ಲಾಕ್ಡೌನ್ ಘೋಷಿಸಲಾಗಿತ್ತು. ಆದರೂ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮೇ 3ರವರೆಗೆ ಲಾಕ್ಡೌನ್ ವಿಸ್ತರಿಸಲಾಗಿತ್ತು. ಕೇಂದ್ರ ಸರ್ಕಾರ ವಿಧಿಸಿದ್ದ ಲಾಕ್ಡೌನ್ ಅಂತ್ಯಗೊಳ್ಳಲು ಕೇವಲ 6 ದಿನಗಳು ಬಾಕಿ ಇವೆ. ಹೀಗಾಗಿ, ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ.