Covid Vaccine: ಕೊರೋನಾ ಲಸಿಕೆ ಹಾಕಿಸಿಕೊಂಡ ನಟ ಶ್ರೀಮುರಳಿ: ವ್ಯಾಕ್ಸಿನ್ ತೆಗೆದುಕೊಳ್ಳುವಂತೆ ಅರಿವು ಮೂಡಿಸುತ್ತಿರುವ ಸ್ಟಾರ್ಗಳು..!
ಕೊರೋನಾ ಎರಡನೇ ಅಲೆ ತೀವ್ರತೆ ಹೆಚ್ಚಾಗಿದ್ದು, ಇದೇ ಕಾರಣದಿಂದ ಕೇಂದ್ರ ಸರ್ಕಾರ 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರು ಲಸಿಕೆ ಪಡೆಯಲು ಅರ್ಹರು ಎಂದು ಘೋಷಿಸಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಜನರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಆದರೂ ಜನರು ಲಸಿಕೆ ಪಡೆಯಲು ಇನ್ನೂ ಯೋಚಿಸುತ್ತಿದ್ದಾರೆ. ಇದೇ ಕಾರಣದಿಂದ ಸಿನಿ ಸ್ಟಾರ್ಗಳು ತಾವು ಲಸಿಕೆ ತೆಗೆದುಕೊಂಡ ನಂತರ ಅದರ ಫೋಟೋ ಹಂಚಿಕೊಂಡು ಜನರಿಗೂ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡುತ್ತಿದ್ದಾರೆ. (ಚಿತ್ರಗಳು ಕೃಪೆ: ಇನ್ಸ್ಟಾಗ್ರಾಂ ಖಾತೆ)